ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಗಾನ ಕಲಾರಂಗಕ್ಕೆ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿ ಕೊಡುತ್ತಿರುವ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‍ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್’ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎಪ್ರಿಲ್ 21ರಂದು ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ಸಂಸ್ಥೆ ಇನ್ನಷ್ಟು ಸುದೃಢವಾಗಿ ಕಲೆ ಮತ್ತು ಸಮಾಜ ಸೇವೆಯನ್ನು ಮಾಡುತ್ತಾ ಬೆಳೆಯಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ನಾಗರಾಜ ಆಚಾರ್ಯ,ಯು. ಎಸ್. ರಾಜಗೋಪಾಲ ಆಚಾರ್ಯ, ಉಪಾಧ್ಯಕ್ಷರುಗಳಾದ ಎಸ್. ವಿ.ಭಟ್, ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ಜೊತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಹೆಚ್. ಎನ್. ಶೃಂಗೇಶ್ವರ, ವಿಜಯಕುಮಾರ ಮುದ್ರಾಡಿ, ಕೆ. ಅಜಿತ್ ಕುಮಾರ್, ಎ. ನಟರಾಜ ಉಪಾಧ್ಯ, ವಿಶ್ವನಾಥ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಧನ್ಯವಾದ ಸಲ್ಲಿಸಿದರು.

 
 
 
 
 
 
 
 
 
 
 

Leave a Reply