ಉಚಿತ ಬ್ರಹತ್ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್, ಪತಂಜಲಿ ಯೋಗ ಸಮಿತಿ ಉಡುಪಿ, ಎಚ್.ಡಿ.ಎಫ್.ಸಿ ಬ್ಯಾಂಕ್ ಉಡುಪಿ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಡಿಸೆಂಬರ್ 03, ಭಾನುವಾರ ಉಡುಪಿ ಗುಂಡಿಬೈಲು ಬ್ರಾಹ್ಮೀ ಸಭಾಭವನದಲ್ಲಿ ಬೆಳಿಗ್ಗೆ 9ರಿಂದ ಮದ್ಯಾಹ್ನ 1ರತನಕನಡೆಯಲಿದೆ.
ಕಾರ್ಯಕ್ರಮವನ್ನು ಮಂಗಳೂರು ಕೆ.ಎಂ.ಸಿಯ ಅಸೋಸಿಯೇಟ್ ಪ್ರೊಫೆಸರ್ ಕಮ್ಯುನಿಟಿ ಮೆಡಿಸಿನ್ ವಿಭಾಗದ ಡಾ.ರಮೇಶ್ ಹೊಳ್ಳ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ಶಿಬಿರದಲ್ಲಿ ತಜ್ಞ ವೈದ್ಯರಿಂದ ರಕ್ತ ಪರೀಕ್ಷೆ, ಇಸಿಜಿ, ನೇತ್ರ ತಪಾಸಣೆ ಸೇರಿದಂತೆ ಇನ್ನಿತರ ಆರೋಗ್ಯ ತಪಾಸಣೆ ನಡೆಸ ಲಾಗುವುದು ಎಂದು ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚಂದ್ರಕಾಂತ್ ಎನ್., ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ಕೆ.ರಾಘವೇಂದ್ರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply