ಉಚಿತ ಬ್ರಹತ್ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್, ಪತಂಜಲಿ ಯೋಗ ಸಮಿತಿ ಉಡುಪಿ, ಎಚ್.ಡಿ.ಎಫ್.ಸಿ ಬ್ಯಾಂಕ್ ಉಡುಪಿ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತನಿ ಕೇಂದ್ರ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಭಾನುವಾರ ಉಡುಪಿ ಗುಂಡಿಬೈಲು ಬ್ರಾಹ್ಮೀ ಸಭಾಭವನದಲ್ಲಿ ಉಚಿತ ಬ್ರಹತ್ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು.

ಮಂಗಳೂರು ಕೆ.ಎಂ.ಸಿಯ ಅಸೋಸಿಯೇಟ್ ಪ್ರೊಫೆಸರ್ ಕಮ್ಯುನಿಟಿ ಮೆಡಿಸಿನ್ ವಿಭಾಗದ ಡಾ.ರಮೇಶ್ ಹೊಳ್ಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಜೀವನ ಶೈಲಿಯಲ್ಲಿ ಎಲ್ಲರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುವುದು ಬಹಳ ಅಗತ್ಯ ಅದರಂತೆ ಇಂಥ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ಯುವಬ್ರಾಹ್ಮಣ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚಂದ್ರಕಾಂತ್ ಎನ್. ಅಧ್ಯಕ್ಷತೆ ವಹಿಸಿದ್ದರು.

ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಎಚ್.ಡಿ.ಎಫ್.ಸಿ ಬ್ಯಾಂಕ್ ಮುಖ್ಯಸ್ಥ ಪ್ರಸನ್ನ ಭಾಗವಹಿಸಿದ್ದರು. ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ಕೆ.ರಾಘವೇಂದ್ರ ಭಟ್ ಕಾರ್ಯಕ್ರಮ ಸಂಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪದಾಕಾರಿಗಳು, ಸರ್ವ ಸದಸ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.
ಶಿಬಿರದಲ್ಲಿ ತಜ್ಞ ವೈದ್ಯರಿಂದ ರಕ್ತ ಪರೀಕ್ಷೆ, ಇಸಿಜಿ, ನೇತ್ರ ತಪಾಸಣೆ ಸೇರಿದಂತೆ ಇನ್ನಿತರ ಆರೋಗ್ಯ ತಪಾಸಣೆ ನಡೆಸಲಾಯಿತು. ರಕ್ತದಾನಿಗಳಿಂದ ರಕ್ತದಾನ ನಡೆಯಿತು.

ಕೋಶಾಕಾರಿ ಕುಮಾರಸ್ವಾಮಿ ಉಡುಪ ಸಹಕರಿಸಿದರು. ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚಂದ್ರಕಾಂತ್ ಎನ್. ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಭಟ್ ಫಣಿಯಾಡಿ ವಂದಿಸಿದರು. ಅಮಿತಾ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply