Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಯೂತ್ ಫಾರ್ ಸೇವಾ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ 

ಕಾರ್ಕಳ :  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಯೂತ್ ಫಾರ್ ಸೇವಾ ಪ್ರಾಯೋಜಕತ್ವದಲ್ಲಿ ಶಾಲೆಯ 6ಮತ್ತು 7 ನೇ ತರಗತಿಯ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ವೆಂಕಟೇಶ್ ಜಿ ನಾಯಕ್ ವಹಿಸಿದ್ದರು. 
ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಶ್ರೀ ಶುಭದ್ ರಾವ್ ಯೂಥ್ ಫಾರ್ ಸೇವಾ ತಂಡದ ಶ್ರೀಮತಿ ರಮಿತಾ ಶೈಲೇಂದ್ರ ಮತ್ತು ರಾಘವೇಂದ್ರ ಪ್ರಭು ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಸಿದ್ಧಪ್ಪ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ಶಾಲೆಯ ಫಿಟ್ ಇಂಡಿಯಾ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿದ ಶ್ರೀವರ ಮತ್ತು ವೈಷ್ಣವಿ ಮತ್ತು ಹೆಬ್ರಿಯ ಅಂತರ್ ರಾಷ್ಟ್ರೀಯ ಯೋಗ ಸಾಧಕಿ ಶಿವಾನಿ ಶೆಟ್ಟಿ ಇವರಿಗೆ ಗೌರವಿಸಲಾಯಿತು.
ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ವಿವಧ ಸ್ಫರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಅಧ್ಯಾಪಕ ವೃಂದ  ಭಾಗವಹಿಸಿ ಸಹಕರಿಸಿದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!