ರಂಜನಿ ಹೆಬ್ಬಾರ್ ಪ್ರತಿಮೆ ಅನಾವರಣ

ನಾಡಿನ ಖ್ಯಾತ ಯುವ ಶಾಸ್ತ್ರೀಯ ಸಂಗೀತ ಗಾಯಕಿಯಲ್ಲಿ ಒಬ್ಬರಾಗಿದ್ದ ದಿವಂಗತ ರಂಜನಿ ಹೆಬ್ಬಾರ್ ಪ್ರತಿಮೆಯನ್ನು ಅವರ ಜನ್ಮದಿನದ ಸಂದರ್ಭದಲ್ಲಿ ರಂಜನಿ ಮೆಮೋರಿಯಲ್ ಟ್ರಸ್ಟ್ ಹಮ್ಮಿಕೊಂಡಿರುವ ಸಂಗೀತೋತ್ಸವ ಸಂದರ್ಭ ಇಂದ್ರಾಳಿಯ ‘ಲತಾಂಗಿ’ ಯಲ್ಲಿ ಸ್ವಾಮಿ ಸೂರ್ಯಪಾದರು ಪ್ರತಿಮೆ ಅನಾವರಣ ಗೊಳಿಸಿದರು.

ಟ್ರಸ್ಟ್ ನ ಪ್ರಮುಖರಾದ ವಿ.ಅರವಿಂದ ಹೆಬ್ಬಾರ್ ಮಾತನಾಡಿ ರಂಜನಿ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಆಕೆ ಕೇವಲ ನನ್ನ ಮಗಳಲ್ಲ ಶುದ್ಧ ಸಂಗೀತದ ಅಭಿಮಾನಿಗಳು ಮತ್ತು ಆಕೆಯ ಕಲೆಯನ್ನು ಇಷ್ಟಪಡುವ ಪ್ರತಿಯೊಬ್ಬರ ಮಗಳು, ಈ ಪ್ರತಿಮೆ ಆಕೆಯ ಕಲಾಸೇವೆಯನ್ನು ನಿತ್ಯವೂ ಸ್ಮರಿಸುವುದ ಕ್ಕೊಂದು ಮಾದ್ಯಮ ಎಂದು ಹೇಳಿದರು.

ಈ ವೇಳೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ವಸಂತಲಕ್ಷ್ಮೀ ಹೆಬ್ಬಾರ್, ಸಾರಂಗ ಹೆಬ್ಬಾರ್ ಉಪಸ್ಥಿತರಿದ್ದರು. ಪ್ರತಿಮೆ ಅನಾವರಣದ ಬಳಿಕ ಸ್ವಾಮಿ ಸೂರ್ಯಪಾದರಿಂದ ಸತ್ಸಂಗ ನಡೆಯಿತು.

ಸೆ.1 ರಿಂದ ನಿರಂತರ 13 ದಿನಗಳ ಈ ಸಂಗೀತೋತ್ಸವದಲ್ಲಿ ದೇಶ-ವಿದೇಶಗಳ ಪ್ರಖ್ಯಾತ ಸಂಗೀತ ಕಲಾವಿದರು. ಫೇಸ್ ಬುಕ್ ಲೈವ್ ಮೂಲಕವೇ ಪ್ರತಿದಿನ ಸಂಗೀತ ಕಚೇರಿ ನೀಡುತ್ತಿದ್ದಾರೆ. ಈಗಾಗಲೇ ತಿರುಮೆಗ್ನನಂ ಟಿಪಿಎನ್ ರಮಾನಾಥನ್ ಮತ್ತು ಪಂಡಮಂಗಲಂ ಪಿ.ಜಿ.ಯುವರಾಜ್, ಚೆನ್ನೈನ ಪ್ರಾರ್ಥನಾ ಸಾಯಿ ನರಸಿಂಹನ್, ಬೆಂಗಳೂರಿನ ಸಿದ್ದಾರ್ಥ ಬೆಳ್ಮಣ್ಣು, ಯು.ಎಸ್. ಎ, ಹ್ಯೂಸ್ಟನ್ ನಿಂದ ಕೃತಿ ಭಟ್, ರಮಣಾ ಬಾಲಚಂದ್ರನ್, ಚೆನ್ನೈನ ಸತ್ಯನಾರಾಯಣ, ಬೆಂಗಳೂರಿನ ಸ್ಪೂರ್ತಿ ರಾವ್ , ಐಶ್ವರ್ಯ ವಿದ್ಯಾ ರಘುನಾಥ್, ಚೆನ್ನೈನ ಜೆ.ಬಿ.ಶೃತಿ ಸಾಗರ್, ಮೈಸೂರಿನ ಶ್ರೀಮತಿದೇವಿ, ಅನುಪಮಾ ಭಾಗವತ್, ಕು. ಸಮನ್ವಿ ಅವರು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply