ಕನ್ನಡ ಜಾನಪದ ರಾಜ್ಯೋತ್ಸವ 

ಕುಂದಾಪುರ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ವರಸಿದ್ದಿ ವಿನಾಯಕ ಪದವಿಪೂರ್ವ ಮತ್ತು ಪದವಿ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ ಮಾತನಾಡಿ ಜಾನಪದ ಆಚರಣೆ ಮತ್ತು ಸಂಸ್ಕೃತಿ ಜಾನಪದ ಕಲೆ ಮತ್ತು ಕಲಾವಿದರ ಗ್ರಾಮೀಣ ಭಾರತದ ತಾಯಿಬೇರು ಗಳಿದ್ದಂತೆ, ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜಾನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂದು ಹೇಳಿದರು.

ವರಸಿದ್ದಿವಿನಾಯಕ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆರಾಡಿ ಗ್ರಾಮದ ಜಾನಪದ ಪ್ರತಿಭೆ ತಿಮ್ಮ ನಾಯ್ಕ ಹಾಗೂ ಪದವಿಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾವ್ಯ ಕುಲಾಲ್ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಸಚಿನ್ ಜನಪದ ಗೀತೆ ಹಾಡಿದರು.

ಕುಂದಾಪುರ ತಾಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ, ಅಂಪಾರು ಸಂಜಯ ಗಾಂಧಿ , ಪ್ರೌಢಶಾಲೆಯ ಮುಖ್ಯ ಶಿಕ್ಷಕ ಉದಯಕುಮಾರ ಬಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸತೀಶ್ ನಾಗದ್ದೆ, ಕನ್ನಡ ಉಪನ್ಯಾಸಕ ಅರುಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸತೀಶ್ ನಾಗದ್ದೆ ವಂದಿಸಿದರು. ಕನ್ನಡ ಉಪನ್ಯಾಸಕಿ ಪ್ರವೀಣಾ ಮಹಾಬಲ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 

Leave a Reply