Janardhan Kodavoor/ Team KaravaliXpress
26.6 C
Udupi
Tuesday, January 31, 2023
Sathyanatha Stores Brahmavara

ಜ.20 ಕ್ಕೆ ತುಳುನಾಡಿನಾದ್ಯಂತ ”ಶಕಲಕ ಬೂಮ್‌‌‌‌‌ ಬೂಮ್”

ಮಂಗಳೂರು : ಯುಎನ್ ಸಿನೆಮಾಸ್ ಬ್ಯಾನರ್ನಡಿ ಮೂಡಿಬರುವ ”ಶಕಲಕ‌ ಬೂಮ್ ಬೂಮ್” ತುಳು ಚಲನಚಿತ್ರ ಜನವರಿ 20 ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ಬುಧವಾರ ನಡೆಸ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ಮಾಪಕರಲ್ಲೊಬ್ಬರಾದ ನಿತ್ಯಾನಂದ ನಾಯಕ್ ನರಸಿಂಗೆ ಅವರು, ಈ ಚಿತ್ರವನ್ನು‌ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದು, ನಿತ್ಯಾನಂದ ನಾಯಕ್ ನರಸಿಂಗ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಣ ಮಾಡಿದ್ದಾರೆ. 
ಡಾಲ್ವಿನ್ ಕೊಳಲಗಿರಿ ಸಂಗೀತ ಚಿತ್ರಕ್ಕಿದೆ. ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ ಎಂದರು. ಚಿತ್ರದ ತಾರಾಂಗಣದ ಪ್ರಮುಖ ಭೂಮಿಕೆ ಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ, ಕಥಾನಾಯಕನಾಗಿ ಗಾಡ್ವಿನ್ ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ , ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ,ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಾಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ ಎಂದು ತಿಳಿಸಿದರು.

ನಗುವಿನ ಟಾನಿಕ್ : ಚಿತ್ರದುದ್ದಕ್ಕೂ ನಗುವಿನ ಟಾನಿಕ್ ಇದ್ದು, ಹೊಟ್ಟೆ ಹುಣ್ಣಾಗಿಸಲು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ್ ಜೊತೆಯಾಗುವ ಸನ್ನಿ ವೇಶಗಳು ನೈಜ್ಯವಾದ ಹಾಸ್ಯದ ಹೊನಲಾಗಿಸಲಿವೆ. ಶುದ್ಧವಾದ ಭಾಷೆ ಬಳಕೆ, ಉತ್ತಮವಾದ ಸಂಭಾಷಣೆ ಮನಮುಟ್ಟುವಂತಹ ನಟನೆಯನ್ನು ಹೊಂದಿರುವ ಚಿತ್ರ ಇದಾಗಿದೆ. ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್, ಸಸ್ಪೆನ್ಸ್ ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!