ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಿದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಕಲಾವಿದರಿಂದ ಉಡುಪಿ ತಾಲೂಕಿನಾದ್ಯಂತ ಆರೋಗ್ಯ ಜಾಗೃತಿ ಮೂಡಿಸಲು ಬೀದಿನಾಟಕ ಅಭಿಯಾನ ನಡೆಯುತ್ತಿದೆ.

ಈ ನಾಟಕಗಳಲ್ಲಿ ಕೊರೋನಾ , ಕ್ಷಯರೋಗ , ತಾಯಿ ಮತ್ತು ಮಗುವಿನ ಆರೈಕೆ ಇನ್ನಿತರ ಆರೋಗ್ಯಕ್ಕೆ ಸಂಬಂಧಪಟ್ಟ ಮಾಹಿತಿಗಳಿದ್ದು, ನಾಟಕಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

 ಸೋಮವಾರ ಕೊಕ್ಕರ್ಣೆಯ ನೆಂಚಾರಿನಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ ಉದ್ಘಾಟಿಸಿ ಬೀದಿ ನಾಟಕಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯ ಬಾಯಿ, ತಾಲೂಕು ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಕ್ಕರ್ಣೆಯ ಸಿಬ್ಬಂದಿಯವರಾದ ಪರಮೇಶ್ವರ್ ನಾಯಕ್, ಗುಲಾಬಿ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಬೀದಿನಾಟಕದ ನಿರ್ದೇಶಕರಾದ ವಿವೇಕಾನಂದ ಎನ್, ಸಂಚಾಲಕ ರವಿರಾಜ್ ಎಚ್.ಪಿ, ಊರಿನ ಮುಖಂಡರು ಹಾಗೂ ಕಲಾವಿದರು ಉಪಸ್ಥಿತರಿದ್ದರು 

 
 
 
 
 
 
 
 
 
 
 

Leave a Reply