ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಉದ್ಘಾಟನೆ

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗ ದೊಂದಿಗೆ, ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಉದ್ಘಾಟನೆಯನ್ನು ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನೆರವೇರಿಸಿದರು. 

 ಯಕ್ಷಗಾನವು ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಮತ್ತು ಕಲೆಯನ್ನು ಅರಳಿಸುವ ಹಾಗೂ ನಮ್ಮ ಇಂದ್ರಿಯಗಳನ್ನು ಜಾಗೃತಗೊಳಿಸುವ ಒಂದು ಪ್ರಕಾರವಾಗಿದೆ ಅದನ್ನು ಬೆಳೆಸುವಲ್ಲಿ ಇಂತಹ ಕಾರ್ಯ ಕ್ರಮಗಳು ಸಹಕಾರಿಯಾಗಲಿ ಎಂದುಶ್ರೀಪಾದರು ಅನುಗ್ರಹಿಸಿದರು.

ಸಮಾರಂಭದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್, ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply