ನಾಳೆಯಿಂದ ಸ್ಕೂಲ್, ಕಾಲೇಜ್ ಬಂದ್!

ತಮಿಳುನಾಡಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾ.22ರಿಂದ 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿ ಗಳಿಗೆ ಶಾಲೆ ಬಂದ್ ಮಾಡುವಂತೆ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯನ್ನು ಮುಚ್ಚಲು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಸೂಚಿಸಿದೆ.

ಎಲ್ಲಾ ಮಕ್ಕಳಿಗೆ ಮುಂಚಿನಂತೆ ಆನ್ ಲೈನ್ ತರಗತಿಗಳು ನಡೆಯಲಿದ್ದು, 10ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ತಿಳಿಸಿದೆ.

 
 
 
 
 
 
 
 
 

Leave a Reply