ತೆಂಕನಿಡಿಯೂರು ಕಾಲೇಜಿನಲ್ಲಿ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ

ಉಡುಪಿ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಸಂದರ್ಭದಲ್ಲಿ ನಿರಂತರವಾಗಿ ಉತ್ಸಾಹವಿರಬೇಕು.  ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ, ನಿರ್ಭೀತಿಯಿಂದ ಇರಬೇಕಾದರೆ ಶಿಸ್ತುಬದ್ಧ ಜೀವನ ಶೈಲಿಯನ್ನು ಮೈಗೂಡಿಸಿಕೊಳ್ಳಬೇಕು. ಸೇವೆಯ ಉದ್ದೇಶವನ್ನು ಇಟ್ಟುಕೊಂಡು ಮಾಡುವ ಯಾವುದೇ ಕೆಲಸವು ಸಾರ್ಥಕವಾಗುತ್ತದೆ. ನಾವು ಕೆಲಸದಲ್ಲಿ ಶ್ರೇಷ್ಠತೆಯನ್ನು ಕಂಡುಕೊಂಡರೆ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಶ್ರೀ ಜಿ. ಜಗದೀಶ್ ಹೇಳಿದರು.

ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರರದಲ್ಲಿ ಫೆ.5 ರಂದು  ನಡೆದ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಹಲವು ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಬಹುದು. ಸತತ ಪ್ರಯತ್ನಗಳಿದ್ದರೆ ಅಸಾಧ್ಯ ಎಂಬುದು ಯಾವುದೂ ಇಲ್ಲಲಎಂದು  ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ತಿಳಿ ಹೇಳಿದರು.

 

 ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ – “ಹಿಂದೆ ಗುರು, ಮುಂದೆ ಗುರಿ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ಯೋಚಿಸಿ ವಿಮರ್ಶಿಸಿ ಬದುಕನ್ನು ಸರಿಯಾಗಿ ಅರ್ಥೈಸಿಕೊಂಡು ವಿದ್ಯಾರ್ಜನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮೌಲ್ಯಯುತವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು” ಎಂದರು. ಕಾಲೇಜಿನ ವತಿಯಿಂದ ಜಿಲ್ಲಾಧಿಕಾರಿಯವರನ್ನು ಗೌರವಿಸಲಾಯಿತು.

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ., ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ನಾತಕೋತ್ತರ ವಿಭಾಗದ ಡೀನ್ ಡಾ. ಸುನೀತಾ ವಿ. ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ವಂದಿಸಿ, ಆಂಗ್ಲ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಶರ್ಮಿಳಾ ಹಾರಾಡಿ ನಿರೂಪಿಸಿದರು. ಬೋದಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply