ರಾಷ್ಟ್ರೀಯ ವಿಚಾರ ಸಂಕಿರಣ

ಉಡುಪಿಯ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಇಲ್ಲಿ ರೀಸೆಂಟ್ ಅಡ್ವಾನ್ಸಸ್ ಇನ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಎಂಬ ವಿಷಯದ ಮೇಲೆ ​ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಅಶೋಕ್ ರಾವ್ ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿದ್ದಾರೆ.

ಕನ್ನಡದ ಡ್ಯಾನ್ ಬ್ರೌನ್ ಎಂದೇ ಖ್ಯಾತರಾದ ವಿಜ್ಞಾನಿ, ಕಾದಂಬರಿಕಾರ ಡಾ. ಕೆ. ಎನ್. ಗಣೇಶಯ್ಯ, ಎನ್‌ಐಟಿಕೆ ಸುರತ್ಕಲ್ ಇಲ್ಲಿನ ಪ್ರಾಧ್ಯಾಪಕರಾದ ಡಾ. ಅರುಣ್ ಇಸ್ಲೂರ್, ಡಾ. ಶಂಕರ್ ರಾವ್, ಮಂಗಳೂರು ವಿ.ವಿ. ಪ್ರಾಧ್ಯಾಪಕರಾದ ಡಾ. ಶಶಿರೇಖ ಹೆಚ್. ಎನ್ ಹಾಗೂ ಡಾ. ಶ್ಯಾಮಪ್ರಸಾದ ವಾರಿಜಾ ರಾಘು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.

ಉದ್ಘಾಟನಾ ಸಮಾರಂಭವು ಶ್ರೀಯುತ ಕೆ. ರಘುಪತಿ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಂಜೆ ೩.೩೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕುವೆಂಪು ವಿ.ವಿ.ಯ ವಿಶ್ರಾಂತ ಕುಲಪತಿಗಳಾದ ಪ್ರೋ. ಬಿ. ಎಸ್. ಶೇರಿಗಾರ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply