ಉಡುಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ  ಮಾಸ್ಕ್, ಸ್ಯಾನಿಟೈಸರ್ ವಿತರಣೆ  

ಉಡುಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ JEE ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಟಿ.ಎಮ್.ಎ ಪೈ ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲದಲ್ಲಿ   ಮಾಸ್ಕ್, ಸ್ಯಾನಿಟೈಸರ್, ಬಿಸ್ಕತ್, ನೀರಿನ ಬಾಟಲ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ  ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತ ಪೂಜಾರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬೈಂದೂರು ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ , ಉಡುಪಿ ನಗರ ಯು.ಮೋ ಕಾರ್ಯದರ್ಶಿ ಶ್ರೀವತ್ಸ , ಕರಣ್ ದಾಸ್, ಸುಕೇಶ್ ಪೂಜಾರಿ ಬೈಂದೂರು ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

Leave a Reply