ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಗಳ ಪ್ರದರ್ಶನ

ಕೆಮ್ಮಣ್ಣು: ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಕೆಮ್ಮಣ್ಣು ಇಲ್ಲಿ ದಿನಾಂಕ 23.02.2023ರ ಶುಕ್ರವಾರದಂದು “ರಾಷ್ಟ್ರೀಯ ವಿಜ್ಞಾನ ದಿನ”‘ದ ಪ್ರಯುಕ್ತ ಇಲ್ಲಿ ವಿದ್ಯಾರ್ಥಿಗಳಿಂದ ತಯಾರಿಸಲಾದ ವಿಜ್ಞಾನ ವಸ್ತುಗಳ ಪ್ರದರ್ಶನ ,ಕರಕುಶಲ ವಸ್ತುಗಳ ಪ್ರದರ್ಶನ , ಮಹಿಳಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬೆಳಿಗ್ಗೆ 9:30ಕ್ಕೆ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಜಂಟಿಕಾರ್ಯದರ್ಶಿ ಸಿಸ್ಟರ್ ಚೇತನ ಎ.ಸಿ.,ಮುಖ್ಯ ಅತಿಥಿಯಾಗಿ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಂತಹ ಶ್ರೀಮತಿ ವೆರಾನಿಕಾ ಕರ್ನೆಲಿಯೋ ಉಪಸ್ಥಿತರಿದ್ದು, ಇವರು ಮಹಿಳೆಯರ ಸಬಲೀಕರಣ ಹಾಗೂ ವಿಜ್ಞಾನ ವಸ್ತು ಪ್ರದರ್ಶನಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಲ್ಲಿ ಯಾವ ರೀತಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಮೂಡಿಸಬಹುದು ಎಂದು ವಿವರಿಸಿದರು . ಗೌರವ ಅತಿಥಿಯಾಗಿ ಶಾಲೆಯ ಹಳೆ ವಿದ್ಯಾರ್ಥಿನಿ ಕುಮಾರಿ ಜನಿಷಾ ಜರ್ನಿಸ್ ಆಗಮಿಸಿದ್ದು ಇವರು ಸಮಾಜದಲ್ಲಿ ಮಹಿಳೆಯರ ಸ್ಥಾನಮಾನದ ಬಗ್ಗೆ ಮಾತನಾಡಿದರು .ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಲ್ವೀಯಾನ್ ಎ.ಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳು ನಿರ್ವಹಿಸಿದರು. ಸುಮಾರು 11:30ಕ್ಕೆ ಸಭಾ ಕಾರ್ಯಕ್ರಮವು ಮುಕ್ತಾಯಗೊಂಡಿತು. ತದನಂತರ ಎಲ್ಲಾ ಪೋಷಕರು ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು, ಕರಕುಶಲ ವಸ್ತುಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದರು.

 
 
 
 
 
 
 
 
 
 
 

Leave a Reply