ನೂತನ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇಲ್ಲಿ ೨೦೨೨-೨೩ನೇ ಸಾಲಿಗೆ ಹೊಸದಾಗಿ ಸೇರಿದ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಮೌಲ್ಯಾಧಾರಿತ ಶಿಕ್ಷಣದಡಿಯಲ್ಲಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಡಾ. ಮಧುಸೂಧನ್ ಭಟ್ ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಯಿತು. ವಾಣಿಜ್ಯಶಾಸ್ತ್ರ ಸ್ನಾತಕೋತ್ತರ
ವಿಭಾಗದ ಮುಖ್ಯಸ್ಥರಾದ ಡಾ. ಉಮೇಶ್ ಮಯ್ಯ ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ, ಸ್ನಾತಕೋತ್ತರ ವಿಭಾಗಗಳ ಸಂಚಾಲಕರಾದ ಡಾ. ಕೆ. ಶ್ರೀಧರ ಪ್ರಸಾದ ಕೆ., ರವರು ಅತಿಥಿಗಳನ್ನು ಪರಿಚಯಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ
ಪ್ರೊ. ಅಶೋಕ ಭಂಡಾರಿಯವರು ವಂದನಾರ್ಪಣೆಗೈದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply