Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ಶೈಕ್ಷಣಿಕ ಕಾರ್ಯಗಾರ

ಉಡುಪಿ : ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಇಂದು 19.05.2022 ರಂದು ಸಂಪನ್ನಗೊoಡಿತು. ಹುಬ್ಬಳ್ಳಿಯ ಮೈ ಲೈಫ್ ಸಂಸ್ಥೆಯ ಸಂಸ್ಥಾಪಕರಾದ ಪ್ರವೀಣ್ ಗುಡಿಯವರು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಅಪರಾಹ್ನ ನಡೆದ ಕಾರ್ಯಕ್ರಮದಲ್ಲಿ ಡಾ. ಎ. ಪಿ. ಭಟ್ ವಿಜ್ಞಾನ ವಿಭಾಗದವರಿಗೆ ಮತ್ತು ಗುರುರಾಜ ರಾವ್ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿಗಳನ್ನು, ಅವರಿಗಿರುವ ಉನ್ನತ ಅವಕಾಶಗಳ ಬಗ್ಗೆ ಹೇಳಿದರು. ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕ ವಿನಯ ಕುಮಾರ್ ಅವರು ಬ್ಯಾಂಕಿನಿoದ ಸಿಗಬಹುದಾದ ಸವಲತ್ತುಗಳ ಬಗ್ಗೆ ತಿಳಿಸಿಕೊಟ್ಟರು. ಡಾ. ಯು.ಸಿ. ನಿರಂಜನ್ ಅವರು ಇಂಜಿನಿಯರಿoಗ್ ವಿದ್ಯಾರ್ಥಿಗಳಿಗೆ ಇರುವ ಉದ್ಯೋಗದ ಹಲವು ಸಾಧ್ಯತೆಗಳ ಬಗ್ಗೆ ತಿಳಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಸ್ವಾಗತಿಸಿದ ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ, ಸದಸ್ಯರಾದ ಅಶೋಕ ಎಂ., ದಾನಿಗಳಾದ ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ತಾರಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆ ನೀಡಿ ವಂದಿಸಿದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!