ಮಂಗಳೂರು: ಕೊರೊನಾದಿಂದ ಈ ಬಾರಿಯ ಪದವಿ ಮತ್ತು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಮೊನ್ನೆಯಷ್ಟೇ ಪ್ರಾರಂಭವಾಗಿತ್ತು. ಆದರೆ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಣೆ ಯಾಗಿದೆ. ಈ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾನಿಲಯ ನಾಳಿನ ಸ್ನಾತಕ ಮತ್ತು ಪದವಿ ಅಂತಿಮ ವರ್ಷದ ಪರೀಕ್ಷೆಯನ್ನು ಮುಂದೂಡಿದೆ.
