ಡಾ.ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ಅಭಿವೃದ್ಧಿ ಸಮಿತಿ ಸಭೆ

ಉಡುಪಿ: ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜು ಅಭಿವೃದ್ಧಿ ಸಭೆ ಸೋಮವಾರದಂದು ಶಾಸಕ ಕೆ. ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ಕುರಿತು, ಕಾಲೇಜಿನಲ್ಲಿ ಪೀಠೋಪಕರಣಗಳನ್ನು ಹೆಚ್ಚಿಸುವ ಬಗ್ಗೆ, ಹಾಗೂ ಗ್ರಂಥಾಲಯಕ್ಕೆ ಯು.ಪಿ.ಎಸ್. ಅಳವಡಿಸುವ ಬಗ್ಗೆ ಚರ್ಚೆ ನಡೆಸಲಾ ಯಿತು

ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಮಿತ್ರಾ .ಆರ್. ಭಟ್ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply