Janardhan Kodavoor/ Team KaravaliXpress
26 C
Udupi
Thursday, April 22, 2021

ಉದ್ಘಾಟನೆಗೆ ಕ್ಷಣಗಣನೆ ಉಡುಪಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆ

ಉಡುಪಿ ಆಗಸ್ಟ್ 26, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು ಕರ್ನಾಟಕ ಸರ್ಕಾರ ಮತ್ತು ಡೆನ್ಮಾಕನ್ ಸಹ ಯೋಗ ದೊಂದಿಗೆ ಸ್ಥಾಪಿಸಲಾಗಿದ್ದು ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆಯಾಗಿದೆ. ಜಿಟಿಟಿಸಿ ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ್ಯ ಇಲಾಖೆಗೆ ಒಳಪಟ್ಟಿದ್ದು ಕರ್ನಾಟಕದಲ್ಲಿ 24 ಉಪಕೇಂದ್ರಗಳನ್ನು ಒಳಗೊಂಡಿದ್ದು ಎಲ್ಲ ಕೇಂದ್ರಗಳು ಅಂತರಾಷ್ಟ್ರೀಯ ಮಟ್ಟದಲ್ಲಿದ್ದು AICTE  ಮತ್ತು ಡಿಟಿಇ ಯಿಂದ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಈ ಸಂಸ್ಥೆಯು ಕೌಶಲ್ಯ ಅಭಿವೃದ್ದಿ ತರಭೇತಿ ಕಾರ್ಯಕ್ರಮಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಪ್ರೋತ್ಸಾಹಿಸುತ್ತಿದೆ.
ಕೈಗಾರಿಕೆಗಳ ಬೆಳವಣಿಗೆ ಉತ್ಕೃಷ್ಟ ಕೌಶಲ್ಯ ತರಭೇತಿ ಹಾಗೂ ನೈಪುಣ್ಯತೆ ಪಡೆದ ನುರಿತ ಮಾನವ ಸಂಪನ್ಮೂಲದ ಮೇಲೆ ಅವಲಂಭಿಸಿದ್ದು, ಉತ್ಕೃಷ್ಟ ರಚನಾತ್ಮಕ ,ಮಾಡ್ಯುಲರ್ ಪ್ರಯೋಗಿಕಾದರಿತ ದೀರ್ಘ ಅವಧಿ ಹಾಗೂ ಅಲ್ಪವಾದಿ ಕೌಶಲ್ಯ ತರಭೇತಿ ಜಿಟಿಟಿಸಿ (G.T.T.C)ಯ ಪ್ರಮುಖ ಕಾರ್ಯವಾಗಿದೆ. ಜಿಟಿಟಿಸಿಯ ನೂತನ ಸಹಾಯಕ ಸಂಸ್ಥೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಈದೀಗ ಉಡುಪಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದಲ್ಲದೆ ಉದ್ಯೋಗ ಕಲ್ಪಿಸುವ ಜವಾಬ್ದಾರಿಯನ್ನು ವಹಿಸಿ ಕೊಂಡಿದೆ.
ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಕೊಳಲಗಿರಿ ಮುಖ್ಯ ರಸ್ತೆಯ ಸರಕಾರಿ ಪ್ರೌಢಶಾಲೆ ಬಳಿ ಜಿಟಿಟಿಸಿ ಸಂಸ್ಥೆಯು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಟೂಲ್ ಆಂಡ್ ಡೈ ಮೇಕಿಂಗ್ ಮತ್ತು ಮೆಕಾಟ್ರಾನಿಕ್ಸ್ ವಿಷಯದಲ್ಲಿ ಡಿಪ್ಲೊಮಾ ಕೋರ್ಸಿನಲ್ಲಿ ನಾಲ್ಕು ವರ್ಷಗಳ ಶಿಕ್ಷಣ ನೀಡುವ ಮೂಲಕ ಉದ್ಯೋಗ ಕಲ್ಪಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿ ಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ಉದ್ಯಮಗಳ ಪರಿಸರಕ್ಕೆ ಹೊಂದಿಕೊಳ್ಳುವುದಕ್ಕಾಗಿ ಹೆಚ್ಚಿನ ಕೌಶಲ್ಯ ತರಬೇತಿ ಪಡೆಯಲು ಕೊನೆಯ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಕಡ್ಡಾಯ ತರಬೇತಿಗಾಗಿ ವಿವಿಧ ಉದ್ಯಮ ಹಾಗೂ ಕೈಗಾರಿಕೆಗಳಿಗೆ ನಿಯೋಜಿಸ ಲಾಗುವುದು.  ಈ ಅವಧಿಯಲ್ಲಿ ಮಾಸಿಕ ಸ್ಟೈಫಂಡ್ ನೀಡಲಾಗುವುದು.
ಎಸ್.ಎಲ್.ಎಲ್ ಸಿ ಪಾಸದ ಆಸಕ್ತರು ಸೆಪ್ಟೆಂಬರ್ 15 ರೊಳಗೆ  www.gttc.co.in   ವೆಬ್ ಸೈಟ್ ಅಥವಾ ಇತ್ತೀಚಿನ ಭಾವಚಿತ್ರ ,10 ನೇ ತರಗತಿ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ,ಇ-ಮೇಲ್ ಐಡಿ ಯೊಂದಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸ ಬಹುದಾಗಿದೆ .ಐಟಿಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ 3ನೇ ಸೆಮಿಸ್ಟರ್ , 2ನೇ ವರ್ಷದ ಡಿಪ್ಲೊಮಾ ಕೋರ್ಸ್ಗೆ ನೇರ ಪ್ರವೇಶ ಪಡೆಯಬಹುದಾಗಿದೆ.
ಸೀಟು ಹಂಚಿಕೆ ಮೆರಿಟ್ ಕಂ ರೋಸ್ಟರ್ ಮೂಲಕ ನಡೆಯಲಿದೆ.ಶೇ.30 ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗಾಗಿ ಮೀಸಲಿ ರಿಸಲಾಗು ತ್ತದೆ. ಜಿಟಿಟಿಸಿಯಲ್ಲಿ ವಿದ್ಯಾರ್ಥಿಗಳಿಗೆ ಅನುಭವಿ ತರಬೇತುದಾರರಿಂದ ವೃತ್ತಿಪರ ಶಿಕ್ಷಣ ನೀಡಲಾಗುತ್ತಿದ್ದು ಉದ್ಯೋಗ ಕಲ್ಪಿಸ ಲಾಗುತ್ತದೆ. ಕೌಶಲ ತರಬೇತಿ ನೀಡುವ ಇತರೇ ವೃತ್ತಿಪರ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಪಡೆಯಲು ಅಗತ್ಯ ತರಬೇತಿ ನೀಡಲಾಗುತ್ತದೆ.
ಜೊತೆಗೆ ಇಂಗ್ಲೀಷ್ ಸಂವಹನ ಕಲೆ ವೃದ್ದಿಸಲು ವಿಶೇಷ ತರಬೇತಿ ಯನ್ನು ನೀಡಲಾಗುತ್ತದೆ. ಜಿಟಿಟಿಸಿಯಲ್ಲಿ ನಾಲ್ಕು ವರ್ಷದ ಡಿಪ್ಲೊಮಾ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಮೈಸೂರು ಸೇರಿದಂತೆ ಬೆಂಗಳೂರು, ಪೂನಾ, ನಾಸಿಕ್ ಮತ್ತು ಕೊಯಮತ್ತೂರಿನಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು ಟೊಯೆಟಾ ಕಿರ್ಲೋಸ್ಕರ್, ಎಲ್ ಆಂಡ್ ಟಿ, ಟೈಟಾನ್ವಿ, ಡಿಯೋಕಾನ್ ಇಂಟೆಲ್ , ನೋಕಿಯಾ ದಂತಹ ಕಂಪನಿಗಳಲ್ಲಿ ಉತ್ತಮ ವೇತನದ ಉದ್ಯೋಗವಕಾಶ ಸಿಗುವುದಲ್ಲದೆ ಬಹುತೇಕ ವಿದ್ಯಾರ್ಥಿಗಳು ಸ್ವಂತ ಕೈಗಾರಿಕೆ ಆರಂಭಿಸಿ ಯಶ್ವಸಿ ಉದ್ಯಮಿ ಗಳಾಗಿದ್ದಾರೆ ಎಂದು ಘಟಕದ ಮುಖ್ಯಸ್ಥ ಮಂಜುನಾಥ್ ನಾಯಕ್ ಎ ತಿಳಿಸಿದ್ದಾರೆ.
ಸಂಸ್ಥೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಮಂಜುನಾಥ ನಾಯಕ್ .ಎ ದೂರವಾಣಿ ಸಂಖ್ಯೆ 0820-2950101, 9880510585 ಸಂಪರ್ಕಿಸಬಹುದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಟ್ಟು ದೇವಳದಲ್ಲಿ ರಾಘವನ ಜನನ

ಪಲಿಮಾರು ಮಠ ಪರಂಪರೆಯ ರಾಮ ನವಮಿಯ ಆಚರಣಾ *ಇತಿಹಾಸದಲ್ಲೇ ಮೊದಲ ಬಾರಿಗೆ* ಮಟ್ಟು ದೇವಳದಲ್ಲಿ ಯತಿದ್ವಯರ ಆಶೀರ್ವಾದದೊಂದಿಗೆ *ಶ್ರೀರಾಮ ದೇವರ ರಥೋತ್ಸವ* ಬಹು ವಿಜ್ರಂಭಣೆಯಿಂದ ಜರುಗಿತು. ಈ ಪರ್ವ ಕಾಲದಲ್ಲಿ *ದೇವಳದ ಹಸುವು ಗಂಡು...

​ ​ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನೆಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ :​ ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ​: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ​ಪರೀಕ್ಷೆಗಳನ್ನು ನೆಡೆಸಿ, ತ್ವರಿತವಾಗಿ​ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ​ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು , ನಿಲರ್ಕ್ಷಿಸದರೆ...

ಉಡುಪಿ: ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರ: ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮ ಸಹೋದರರಿಂದಲೇ ಆಕ್ಷೇಪ!

ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದಲೇ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶ ರಿಂದ ಘೋಷಣೆಯಾಗಿದ್ದು ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ...

ವಾರಾಂತ್ಯದಲ್ಲಿ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು – ರಘುಪತಿ ಭಟ್ ಆಗ್ರಹ

ಉಡುಪಿ: ರಾಜ್ಯದಲ್ಲಿ ವಾರಾಂತ್ಯ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಿದ ದಿನ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಜನ ನಿಗದಿಪಡಿಸಿದ ದಿನದಂದೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕೋವಿಡ್ - 19...

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ​ಯಾಗಿ ​ಅನಿರುದ್ದ ಸರಳತ್ತಾಯ​ ​ಆಯ್ಕೆ

ಉಡುಪಿ: 16ವರ್ಷ ವಯಸ್ಸಿನ ಅನಿರುದ್ದ ​​​​ಸರಳತ್ತಾಯ​ ​ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ​ಶ್ರೀಶ್ರೀ  ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.ಅವರು ಮಂಗಳವಾರ ಹಿರಿಯಡ್ಕ ಬಳಿಯ...
error: Content is protected !!