ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸುವ ಸಮವಸ್ತ್ರವನ್ನು ಧರಿಸಬೇಕು: ರಾಜ್ಯ ಸರಕಾರದ ಆದೇಶ*

ಬೆಂಗಳೂರು: ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯು ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸಬೇಕು ಎಂದು ಶಿಕ್ಷಣ ಇಲಾಖೆ(ಪದವಿ ಪೂರ್ವ) ಆದೇಶ ಹೊರಡಿಸಿದೆ.

ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಪಡಿಸದೆ ಇದ್ದಲ್ಲಿ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನೆ ಧರಿಸಬೇಕು ಎಂದು ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಸರಕಾರದ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್.ಎನ್. ಆದೇಶ ದಲ್ಲಿ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply