ಇನ್ನಾ ಪ್ರೌಢಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಯಲ್ಲಿ ಮುಂಡ್ಕೂರು ವಿವಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸುದರ್ಶನ ವೈ ಎಸ್ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಫೆ. 26ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಶಾಲೆಯ ಸಂಚಾಲಕ ಸತೀಶ್ ಸದಾನಂದ  ಸಭಾಧ್ಯಕ್ಷತೆ ವಹಿಸಿದ್ದರು. ಸುದರ್ಶನ್ ಅವರನ್ನು ಶಾಲು ಹೊದಿಸಿ, ಫಲ ಪುಷ್ಪ ಮಾನಪತ್ರ ಸಹಿತ ಅಧ್ಯಕ್ಷರು ಸನ್ಮಾನಿಸಿದರು. ಸನ್ಮಾನಕ್ಕೆ ಉತ್ತರಿಸಿದ ಸುದರ್ಶನ್  ಈ ಸನ್ಮಾನ ನನ್ನ ಮನಸ್ಸಿನಲ್ಲಿ ಸ್ಮರಣೀಯ ಅನುಭವ ನೀಡಿದೆ. ಇನ್ನಾ ಮುಂಡ್ಕೂರು ಎರಡು ಗ್ರಾಮಗಳ ಮತ್ತು ಎರಡು ವಿದ್ಯಾಸಂಸ್ಥೆಗಳ ಬಾಂಧವ್ಯದ ಪ್ರತೀಕವಾಗಿ ಈ ಸನ್ಮಾನ ಸ್ವೀಕರಿಸಿದ್ದೇನೆ ಎಂದರು.ಇದೇ ವೇಳೆ ಶಾಲೆಯ ಪೂರ್ವ ವಿದ್ಯಾರ್ಥಿ ಆಗಿದ್ದು ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಮತ್ತು ಉಪಾಧ್ಯಕ್ಷೆ ಸರಿತಾ ಶೆಟ್ಟಿಯನ್ನು ಕೂಡ ಅತಿಥಿಗಳು ಸ್ಮರಣಿಕೆ ನೀಡಿ ಶಾಲು ಹೊದಿಸಿ ಗೌರವಿಸಿದರು. ಕುಶ ಆರ್ ಮೂಲ್ಯ  ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಕೆಲಸ ಮಾಡುವುದಾಗಿ ನುಡಿದರು.

 ಮಂಗಳೂರಿನ ಕಾಮತ್ ಆಪ್ಟಿಕಲ್ ಸಂಸ್ಥೆಯಿಂದ ಎಲ್ಲಾ ವಿದ್ಯಾರ್ಥಿಗಳ ಉಚಿತ ಕಣ್ಣಿನ ತಪಾಸಣೆ ನಡೆಯಿತು. ಮಾಜಿ ತಾಲೂಕು ಪಂಚಾಯತ್ ಸದಸ್ಯ ಜಯ ಎಸ್ ಕೋಟ್ಯಾನ್ ಅವರು ದೀಪ ಬೆಳಗಿಸಿ ಈ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ರಾವ್ ಪಿ ಎನ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ನೇತ್ರ ಪರೀಕ್ಷಕ ಜೋಸ್ ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು. ಶಿಕ್ಷಕ ರಾಜೇಂದ್ರ ಭಟ್ ಕೆ. ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 
 
 
 
 
 
 
 
 
 
 

Leave a Reply