ಕೊಡವೂರು ಶಾಲೆ​ಯ​ ಹೆಚ್ಚುವರಿ ಕೊಠಡಿಗೆ ಶಂಕು ಸ್ಥಾಪನೆ

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕೊಡವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಸರ್ವ ಶಿಕ್ಷಣ ಅಭಿಯಾನದ ರೂ. 10 ಲಕ್ಷ ಮಂಜೂರಾಗಿದ್ದು, ಸದ್ರಿ ಕಾಮಗಾರಿಯ ಶಂಕು ಸ್ಥಾಪನೆ ಇಂದು ದಿನಾಂಕ 02-09-2020 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ನೆರವೇರಿಸಿದರು.

ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಪ್ರಧಾನ ಅರ್ಚಕ ಪ್ರಸಾದ್ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶೈಲಜಾ ಕುಂದರ್, ಕಟ್ಟಡ ಅಭಿವೃದ್ಧಿ ಸಮಿತಿ ಸದಸ್ಯರಾದ ಮಧುಕರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಹಿರಿಯರಾದ ಕೆ.ಟಿ ಪೂಜಾರಿ, ರಾಘವೇಂದ್ರ ರಾವ್, ಭಾಸ್ಕರ್ ಪಾಲನ್, ಪ್ರಭಾತ್ ಕೂಡವೂರು, ಸತೀಶ್ ಕೊಡವೂರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply