Janardhan Kodavoor/ Team KaravaliXpress
26.6 C
Udupi
Saturday, September 18, 2021

ಉಡುಪಿ :ವಯೋನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ

ಉಡುಪಿ : ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ವಯೋನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. 

ವಯೋನಿವೃತ್ತಿ ಹೊಂದಿದ ಉಡುಪಿ ಲೀಡ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗಡೆ, ಮಂಗಳೂರು ವಲಯದ ಜಂಟಿ ನಿರ್ದೇಶಕ ವಸಂತರಾಜ್ ಶೆಟ್ಟಿ ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾಗಿದ್ದ ಎನ್. ನಿತ್ಯಾನಂದ ರನ್ನು ಸನ್ಮಾನಿಸಲಾಯಿತು.

ಉಡುಪಿ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ರಘುಪತಿ ಭಟ್, ಮಂಗಳೂರು ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಪ್ರೊ. ರಾಜಶೇಖರ ಹೆಬ್ಬಾರ್, ಉಡುಪಿ ಲೀಡ್ ಕಾಲೇಜು ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ, ಎಕ್ಕಾರು, ಅಜ್ಜರಕಾಡು ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಹಾಗೂ ಕಾಲೇಜಿನ ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್‌ಕುಮಾರ ಶೆಟ್ಟಿ ನಿರೂಪಿಸಿ, ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್.ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ ನೆರೆದ ಎಲ್ಲರನ್ನೂ ಸ್ವಾಗತಿಸಿದರು. ವಿಜ್ಞಾನ ನಿಖಾಯದ ಡೀನ್‌ ಪ್ರೊ. ರಾಮಚಂದ್ರ ಅಡಿಗ ಜಿ. ವಂದಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!