Janardhan Kodavoor/ Team KaravaliXpress
31 C
Udupi
Friday, February 26, 2021

ಸರಕಾರಿ ಪದವಿ ಪೂರ್ವ ಕಾಲೇಜು,ಮಲ್ಪೆ : ಪ್ರೌಢಶಾಲಾ ವಿಭಾಗದಲ್ಲಿ ಕಂಪ್ಯೂಟರ್ ಟ್ಯಾಬ್ ವಿತರಣೆ

 ಉಡುಪಿ :- ರೋಟರಿ ಉಡುಪಿ ಮತ್ತು ಪಬ್ಲಿಕ್ ಟಿ.ವಿ. ಇವರ ಜಂಟಿ ಸಹಯೋಗದಲ್ಲಿ ಮಲ್ಪೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ವಿತರಣಾ ಕಾರ್ಯಕ್ರಮವನ್ನು ರೋ. ಪಿ.ದಯಾನಂದ ಶೆಟ್ಟಿ, ಚೆಯರ್ಮೇನ್, ಸ್ಕೂಲ್ ಸಪೋರ್ಟ್ ಕಮಿಟಿ,  ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿ, ಟ್ಯಾಬ್‍ಗಳನ್ನು ವಿತರಿಸಿದರು.

 

ನಂತರ ಮಾತನಾಡಿದ ಅವರು, ಕರೋನಾದ ಈ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಟ್ಯಾಬ್ ಸಹಕರಿಯಾಗಲಿದೆ, ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗ ಪಡಿಸಿಕೊಂಡು ಕಲಿಕೆಯಲ್ಲಿ ಉತ್ತಮ ಸಾಧನೆಗೈಯಬೇಕು ಎಂದರು.

 ಶಾಲಾಭಿವೃಧ್ದಿಸಮಿತಿಯ ಉಪಾಧ್ಯಕ್ಷ  ಪಾಂಡುರಂಗ ಮಲ್ಪೆ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲ ಸಿ ಬಂಗೇರ, ನಗರಸಭಾ ಸದಸ್ಯ ಸುಂದರ ಕಲ್ಮಾಡಿ, ರೋ‌. ಮಹೇಶ ಕುಮಾರ, ಇನ್ನರ್ ವೀಲ್ ಅಧ್ಯಕ್ಷೆ ರೋ.ಮಾಲತಿ ತಂತ್ರಿ ಉಪಸ್ಥಿತರಿದ್ದು ಶುಭ ಹಾರೈಸಿದರು.ದಾನಿಗಳಾದ ಶ್ರೀ ಮೋಹನದಾಸ ಪೈ ಮತ್ತುಉಡುಪಿ ರೋ. ಅಧ್ಯಕ್ಷೆ ರೋ. ರಾಧಿಕಾ ಲಕ್ಷ್ಮೀನಾರಾಯಣ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯ್ತು.ಅಧ್ಯಕ್ಷೆ ರೋ. ರಾಧಿಕಾ ಲಕ್ಷ್ಮಿನಾರಾಯಣ ಅವರು ತಮ್ಮ ಭಾಷಣದಲ್ಲಿ, ಟ್ಯಾಬ್‍ನಲ್ಲಿ ಗುಣಮಟ್ಟದ ಪಾಠಗಳನ್ನು ಸಂಯೋಜಿಸಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಲಿದೆ ಎಂದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂದ್ಯಾ ಸ್ವಾಗತಿಸಿ, ರೋ. ದೀಪ ಭಂಡಾರಿ ವಂದಿಸಿದರು.ರೋ. ರಾಮಚಂದ್ರ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!