ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ : ಕಲ್ಯಾಣಪುರದ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಾ.ವಲೇರಿಯನ್ ಮೆಂಡೋನ್ಸ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯದ ಪ್ರಾಮುಖ್ಯತೆಯ ಕುರಿತು ತಿಳಿಸಿದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಧರ್ಮಭಗಿನಿ ಶಾಂತಿ ಪ್ರಮೀಳ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ವೀರಾ ಡಿಸಿಲ್ವಾ ಹಾಗೂ ಧರ್ಮಗುರು ಜೋಯ್ ಅಂದ್ರಾದೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಿಯಾ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು.

 
 
 
 
 
 
 
 
 
 
 

Leave a Reply