ಹಿರಿಯಡಕ ಪದವಿ ಕಾಲೇಜಿನ ವಾರ್ಷಿಕ ಸಂಚಿಕೆಗೆ ವಿಶ್ವವಿದ್ಯಾನಿಲಯ ಮಟ್ಟದ ಪ್ರಥಮ ಪ್ರಶಸ್ತಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ 2019-20 ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ “ಹಿರಿಯ ಸಿರಿ”ಯು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ವರ್ಗ-2 ರಲ್ಲಿ “ಅತ್ಯುತ್ತಮ ಕಾಲೇಜು ವಾರ್ಷಿಕ ಸಂಚಿಕೆ” ಪ್ರಥಮ ಬಹುಮಾನ ಪಡೆದಿದೆ.

ವಿಶ್ವವಿದ್ಯಾನಿಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಚಿಕೆಯ ಪ್ರಧಾನ ಸಂಪಾದಕರಾದ ಡಾ. ನಿಕೇತನ, ಸಂಚಿಕೆಯ ಸಂಪಾದಕರಾದ ಸುಜಯಾ ಕೆ.ಎಸ್ ಮತ್ತು ಸಹಾಯಕ ಪ್ರಾಧ್ಯಾಪಕರಾದ ಶರತ್ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿ.ವಿ ಕುಲಸಚಿವರಾದ ಡಾ. ಕಿಶೋರ್ ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ. ಪಿ.ಎಲ್ ಧರ್ಮ, ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರು ವಿವಿಧ ವಿಭಾಗಗಳ ಡೀನ್ ಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply