ನಿಟ್ಟೂರು ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮನೋರಮಾರಿಗೆ ಬೀಳ್ಕೊಡುಗೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ : ಸುಮಾರು 40 ವರ್ಷಗಳ ಕಾಲ‌ ನಿಟ್ಟೂರು ಪ್ರೌಢ ಶಾಲೆಯಲ್ಲಿ ಗ್ರಂಥಪಾಲಕಿ ಹಾಗೂ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮನೋರಮಾ ಅವರ ಬೀಳ್ಕೊಡುಗೆ ಸಮಾರಂಭ ಇಂದು ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಿಟ್ಟೂರು ಪ್ರೌಢ ಶಾಲೆಯ ರಜತ ಸಭಾಭವನದಲ್ಲಿ ಜರಗಿತು.

ನಿವೃತ್ತ ಮುಖ್ಯೋಪಾಧ್ಯಾಯ ವೇಣುಗೋಪಾಲ ಆಚಾರ್ಯ,ಎಸ್.ವಿ.ಭಟ್,ಭಾಸ್ಕರ್ ಡಿ.ಸುವರ್ಣ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ, ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್,ಸುಮನ್ ಆಚಾರ್ಯ, ಮುಖ್ಯೋಪಾಧ್ಯಾಯೆ ಅನಸೂಯ ಹಾಗೂ ನಿಟ್ಟೂರು ಎಜುಕೇಷನಲ್ ಸೊಸೈಟಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply