ಗಂಗೊಳ್ಳಿಯಲ್ಲಿ “ಪಯಣ”

ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆಶ್ರಯದಲ್ಲಿ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಸಿದ್ಧತಾ ಮಾರ್ಗದರ್ಶಿ ಕಾರ್ಯಕ್ರಮ ‘ಪಯಣ’ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆಯಲಿದೆ. ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಿದ್ದಾರೆ. ಶಿವಮೊಗ್ಗದ ಹಿರಿಯ ನಾಗರಿಕರ ಸಹಾಯವಾಣಿಯ ಕಾನೂನು ಸಲಹೆಗಾರರಾದ ಅನಂತ ಗಂಗೊಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ.ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕೆನರಾ ಬ್ಯಾಂಕ್ ಉದ್ಯೋಗಿ ಗಂಗಾಧರ ಪೈ, ಬಿಲ್ಲವರ ಹಿತ ರಕ್ಷಣಾ ವೇದಿಕೆ ಉಪಾಧ್ಯಕ್ಷ ಜಿ. ಕೆ.ವೆಂಕಟೇಶ್ ಕೊಡೇರಿಮನೆ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply