ಸ್ವರಕ್ಷಣೆಯೇ ಮಹಿಳೆಯರಿಗೆ ಭೂಷಣ – ಶ್ರೀಮತಿ ವೆಲೆಟ್ ಫೆಮಿನಾ

ತಂತ್ರಜ್ಞಾನ ಬೆಳದಂತೆ ಮೋಸದ ಬಲೆಯಲ್ಲಿ ಬೀಳಿಸಲು ಪ್ರಯತ್ನಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ ಇಂದು ಅವಿದ್ಯಾವಂತರಿಗಿಂತ ವಿದ್ಯಾವಂತರೆ ಹೆಚ್ಚು ಹೆಚ್ಚು ಮೋಸದ ಬಲೆಗೆ ಬೀಳುತ್ತಿದ್ದಾರೆ ಪ್ರಸ್ತುತ ಸನ್ನಿವೇಶದಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ತಮ್ಮ ಬಗ್ಗೆ ಜಾಗರೂಕರಾಗಿರುವ ಅವಶ್ಯಕತೆ ಹೆಚ್ಚಾಗುತ್ತಿದೆ ಸ್ವರಕ್ಷಣೆ ಮತ್ತು ಜಾಗರೂಕತೆ ಎಲ್ಲ ಕಾಲ ಮತ್ತು ಸನ್ನಿವೇಶಗಳಲ್ಲೂ ಮಹಿಳೆಯರಿಗೆ ಭೂಷಣ ಎಂದು ಉಡುಪಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ವೆಲೆಟಾ ಫೆಮಿನಾ ಅಭಿಪ್ರಾಯಪಟ್ಟರು.

ಅವರು ಇತ್ತೀಚಿಗೆ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಮಹಿಳಾ ಸುರಕ್ಷತಾ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಶಾಂತಿ ಪ್ರಭು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಇರುವ ಸರಕಾರಿ ಸೌಲಭ್ಯ ಮತ್ತು ಯೋಜನೆಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.

ಆರ್ ಡಿ ಎಸ್ ಸಂಸ್ಥೆ, ಶಾಲೆಯ ಗ್ರಾಹಕ ಕ್ಲಬ್ ಮತ್ತು ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ಸಮುದಾಯ ಜಾಗೃತಿ, ಭಾಗವಹಿಸುವಿಕೆ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಚಟುವಟಿಕೆಗಳ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮುದಾಯ ಅಭಿವೃದ್ಧಿ ಸಹಾಯಕರಾದ ಮಾಲತೇಶ್, ಏನ್ ಎಸ್ ಎಸ್ ನ ಶ್ರೀಮತಿ ಮಂಜುಳಾ, ಗ್ರಾಹಕ ಕ್ಲಬ್ ನ ಉಪಾಧ್ಯಕ್ಷೆ ಅನಘಾ ಹೊಳ್ಳ ಉಪಸ್ಥಿತರಿದ್ದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಆರ್ ಡಿ ಎಸ್ ಸಂಸ್ಥೆಯ ಟೀಮ್ ಲೀಡರ್ ಜ್ಯೋತಿ ಸ್ವಾಗತಿಸಿದರು ಮಹೇಶ್ ಧನ್ಯವಾದಗೈದರು.

 
 
 
 
 
 
 
 
 
 
 

Leave a Reply