POCSO ಅರಿವು – ಜಾಗೃತಿ ಕಾರ್ಯಕ್ರಮ

ಲೈಂಗಿಕ ಶೋಷಣೆಯೆಂಬುದು ಹೆಣ್ಣು ಮಕ್ಕಳಿಗೆ ಮಾತ್ರ ಸೀಮಿತವಲ್ಲ, ಗಂಡುಮಕ್ಕಳು ಕೂಡಾ ಲೈಂಗಿಕ ಶೋಷಣೆಗೊಳಗಾಗುವ ಸಾಧ್ಯತೆಗಳಿರುತ್ತದೆ. POCSO ಕಾಯಿದೆಯಲ್ಲಿ ಇವೆಲ್ಲದರಿಂದ ರಕ್ಷಣೆಗೆ ಅವಕಾಶವಿದೆ. ಹೆಣ್ಣುಮಕ್ಕಳು ಲೈಂಗಿಕ ಶೋಷಣೆಗೊಳಗಾದಾಗ ಯಾವುದೇ ಹಿಂಜರಿಕೆಯಿಲ್ಲದೆ ಸಂಬ೦ಧಿಸಿದ ಪ್ರಾಧಿಕಾರಕ್ಕೆ ಮಾಹಿತಿ ನೀಡಿ ರಕ್ಷಣೆ ಪಡೆದುಕೊಳ್ಳಬೇಕು.
 ಇದರ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿನಿಯರು ಕಾರ್ಯ ಪ್ರವೃತ್ತರಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಪಡಿ ಸಂಸ್ಥೆಯ ನಿರ್ದೇಶಕರಾದ ಶ್ರೀ ರೆನ್ನಿ ಡಿಸೋಜಾ ಇವರು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಂಘ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ POCSO ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡಿದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಎಸ್ ಇವರು ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡುತ್ತ POCSO ಕಾಯಿದೆಯ ವಿಚಾರಗಳ ಬಗ್ಗೆ ತಿಳುವಳಿಕೆ ಪ್ರಸ್ತುತ ಸಮಾಜದಲ್ಲಿ ಬಹಳ ಅಗತ್ಯ ಜೀವನದಲ್ಲಿ ಎದುರಿಸುವ ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದ್ದೇ ಇರುತ್ತದೆ ಎಂಬುದಾಗಿ ತಿಳಿಸಿದರು. 
ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳಾದ ಸಿಂಚನ ಮತ್ತು ರಿಯೋನ ಉಪಸ್ಥಿತರಿದ್ದರು. ಕಾಲೇಜಿನ ಮಹಿಳಾ ಸಂಘದ ಸಂಚಾಲಕರಾದ ಶ್ರೀಮತಿ ವಾರಿಜ ಸ್ವಾಗತಿಸಿದರು. ಕು. ಕೃತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
 
 
 
 
 
 
 
 
 
 
 

Leave a Reply