Janardhan Kodavoor/ Team KaravaliXpress
28.6 C
Udupi
Sunday, August 1, 2021

ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಶ್ರೀಮತಿ ಸಂಧ್ಯಾ ಮಹೇಶ್ ಅಧಿಕಾರ ಸ್ವೀಕಾರ

ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯಿನಿಯಾಗಿ ಶ್ರೀಮತಿ ಸಂಧ್ಯಾ ಮಹೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಎಂ.ಎಸ್ಸಿ B.Ed ಪದವೀಧರರಾಗಿರುವ ಇವರು ಹದಿನಾರು ವರ್ಷಗಳ ಕಾಲ ಉಡುಪಿ ಪೂರ್ಣಪ್ರಜ್ಞ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ.ಶ್ರೀಮತಿ ಸಂಧ್ಯಾ ಮಹೇಶ್ ರವರು ಅನೇಕ ಶೈಕ್ಷಣಿಕ ಚಟುವಟಿಕೆಗಳಲ್ಲಿ, ಸೆಮಿನಾರುಗಳಲ್ಲಿ ಭಾಗವಹಿಸಿರುತ್ತಾರೆ. ಅನೇಕ ಶೈಕ್ಷಣಿಕ ಕಾರ್ಯಾಗಾರಗಳಲ್ಲಿ ಕೂಡಾ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.  ಅದಮಾರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಶೀರ್ವಾದದೊಂದಿಗೆ ಅದಮಾರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿಯಾದ ಶ್ರೀಯುತ ಪ್ರದೀಪ್ ಕುಮಾರ್ ರವರು ಹಾಗೂ ಪ್ರಾಂಶುಪಾಲರಾದ ಶ್ರೀ ಎಂ.ರಾಮಕೃಷ್ಣ ಪೈ ರವರು ಮತ್ತು ಉಪಪ್ರಾಂಶುಪಾಲರಾದ ಡಾ.ಒಲ್ವಿಟಾ ಡಿಸೋಜಾ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಯುತ ಶ್ರೀಕಾಂತ್ ರಾವ್ ಅವರು ಹಾಗೂ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ನಿಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.ಸಂಸ್ಕೃತ ಉಪನ್ಯಾಸಕರಾದ ಡಾ.ಜಯ ಶಂಕರ್ ಕಂಗಣ್ಣಾರು ರವರು ಕಾರ್ಯಕ್ರಮ ನಿರ್ವಹಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಸುಪ್ರಭಾತ

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!