ಪಿಪಿಸಿ: “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು”

ಉಡುಪಿ:  ಕರಾವಳಿಯ ಉಭಯ ಜಿಲ್ಲೆಗಳ ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದರೂ, ಶ್ರಮಜೀವಿಗಳಾಗಿದ್ದರೂ ಕೂಡಾ ತಿಳುವಳಿಕೆಯ ಕೊರತೆಯಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸದೇ ಆಡಳಿತಾತ್ಮಕ ಸೇವೆಗಳಿಂದ ದೂರ ಉಳಿದಿದ್ದಾರೆ.
ದೇಶದ ಇತರ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಎಳವೆಯಿಂದಲೇ ಈ ಕುರಿತು ಜಾಗೃತಿ-ಮಾಹಿತಿ ನೀಡಲಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ನಡೆಯಬೇಕಿದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶ್ರೀ ಪ್ರಶಾಂತ್ ನೀಲಾವರ ಇವರು ಅಭಿಪ್ರಾಯ ಪಟ್ಟರು.
ಪೂರ್ಣಪ್ರಜ್ಞ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಏರ್ಪಡಿಸಿದ ಕಾರ್ಯಕ್ರಮದಲ್ಲಿ “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮ ಸಂಯೋಜಕಿ ಅರ್ಥಶಾಸ್ತ್ರ  ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸೌಜನ್ಯ . ಎಸ್. ಶೆಟ್ಟಿ ಮತ್ತು ವಿಭಾಗ ಮುಖ್ಯಸ್ಥ ಡಾ. ಪ್ರಕಾಶ್‌ರಾವ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ. ರಾಮು ಎಲ್ ಅಧ್ಯಕ್ಷತೆ ವಹಿಸಿದ್ದರು. ಕು. ಅನುಷಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಕು.ಶ್ರೀರಕ್ಷಾ ಹೆಗಡೆ ಸ್ವಾಗತಿಸಿದರು ಮತ್ತು ಕು. ಸತ್ಯವ್ವ ವಂದನಾರ್ಪಣೆಗೈದರು.
 
 
 
 
 
 
 
 
 
 
 

Leave a Reply