ಪೂರ್ಣಪ್ರಜ್ಞ  ಕಾಲೇಜಿನಲ್ಲಿ ಮಾನವ ಹಕ್ಕು ದಿನಾಚರಣೆ

ಮಾನವ ಹಕ್ಕು ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗಬಾರದು, ದಿನವೂ ಒಬ್ಬ ಪ್ರಜೆ ತನ್ನ ಹಕ್ಕುಗಳ ಬಗ್ಗೆ ಜಾಗೃತನಾಗಿರಬೇಕು, ಹಕ್ಕು ಎನ್ನುವುದು ಒಂದು ಜವಾಬ್ದಾರಿ, ಸರಿಯಾದ ಸಮಯದಲ್ಲಿ ಸರಿಯಾದ ಹಕ್ಕುಗಳ ನಿರ್ವಹಣೆ ಮಾಡಿದಾಗ ಮಾತ್ರ ಮಾನವ ಹಕ್ಕು ದಿನಾಚರಣೆ ಅರ್ಥಪೂರ್ಣವಾಗಿರುತ್ತದೆ ಎಂದು ಅದಮಾರು ಪೂರ್ಣಪ್ರಜ್ಞ ವಿದ್ಯಾ ಕೇಂದ್ರದ  ಆಡಳಿತ ಪ್ರತಿನಿಧಿ ಪ್ರೊ. ನಿತ್ಯಾನಂದ. ಎನ್ ಇವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಮಾನವ ಹಕ್ಕು ಘಟಕ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಸಂಘದ ಜಂಟಿ ಆಶ್ರಯದಲ್ಲಿ ಮಾನವ ಹಕ್ಕು ದಿನಾಚರಣೆಯ ಅಂಗವಾಗಿ  ದಿನಾಂಕ 12-12-2023 ರಂದು  ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀಯುತರು ಮಾನವ ಹಕ್ಕುಗಳು, ಅದನ್ನು ಚಲಾಯಿಸಲು ಸಂವಿಧಾನದಲ್ಲಿ ರೂಪಿಸಲಾದ ಶರತ್ತುಗಳು, ಕಾನೂನು ಸಂಬಂಧ ರಕ್ಷಣೆಗಳು ಇವುಗಳ ವಿಷಯವಾಗಿ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮು.ಎಲ್ ಇವರು ಈ ರೀತಿಯ ಆಚರಣೆಗಳು ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ನಡೆಯಲು ಸಹಾಯಕವಾಗುತ್ತವೆ, ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.

ಮಾನವ ಹಕ್ಕು ಘಟಕದ ಸಂಯೋಜಕಿ ಶ್ರೀಮತಿ ಶಾಲಿನೀ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ಜಯಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಮಾರಿ ಕೃತಿಕಾ ಸ್ವಾಗತಿಸಿ, ಕುಮಾರಿ ಅಶ್ವಿನೀ ವಂದಿಸಿದರು. ಕುಮಾರಿ ಅಂಕಿತಾ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply