ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ  ಯೋಜನಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ  ರಾಷ್ಟ್ರೀಯ ಸೇವಾ  ಯೋಜನಾ ಘಟಕದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಕಾಲೇಜಿನ ಕ್ಯಾಂಪಸ್ ನಲ್ಲಿ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ದಿವ್ಯ ಹಸ್ತದಿಂದ ಗಿಡನೆಟ್ಟು ವನಮಹೋತ್ಸವಕ್ಕೆ ಚಾಲನೆ  ನೀಡಲಾಯಿತು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀಪಾದರು ಆಶೀರ್ವಚಿಸುತ್ತಾ “ಮರಗಿಡಗಳನ್ನು ನೆಡುವುದರಿಂದ ಶುದ್ಧ ಆಮ್ಲಜನಕ ಸಿಗುತ್ತದೆ. ಕೈಗಾರಿಕಾ ಆಮ್ಲಜನಕದ ಕಾರಣದಿಂದ ಭಯಾನಕ ಕಪ್ಪು ಶಿಲೀಂದ್ರದ  ರೋಗಬಾಧೆಗೆ  ಒಳಗಾಗಿ  ಮನುಷ್ಯರು ಮಾರಣಾಂತಿಕ ಸ್ಥಿತಿಗೆ  ತಲುಪುತ್ತಿದ್ದಾರೆ. ಇದು ಪರಿಸರನಾಶದ ದುಷ್ಕೃತ್ಯದಿಂದ ಆಗಿದೆ. ಆದ್ದರಿಂದ ಗಿಡಗಳನ್ನು ಬೆಳೆಸುವುದು ಹಾಗೂ ವನ ಸಂರಕ್ಷಣೆ ಮಾಡುವುದರಲ್ಲಿ ವಿದ್ಯಾರ್ಥಿಗಳು ಜನಜಾಗೃತಿ ಮೂಡಿಸಬೇಕು ಎಂದು” ನುಡಿದರು.  
ಆಡಳಿತ ಮಂಡಳಿಯ ಗೌರವಾನ್ವಿತ ಕಾರ್ಯದರ್ಶಿ ಖ್ಯಾತ ನ್ಯಾಯವಾದಿ ಶ್ರೀ ಪ್ರದೀಪ್ ಕುಮಾರ್ ಗಿಡನೆಟ್ಟು ಶುಭಹಾರೈಸಿದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಸುಕನ್ಯ ಮೇರಿ ಜೆ, ಕಛೇರಿ ಸಿಬ್ಬಂದಿ ವೆಂಕಟೇಶ್ ಹಾಗೂ ಎನ್.ಎಸ್.ಎಸ್. ಮುಖಂಡರಾದ ಆಕಾಶ್ ಹಾಗೂ ವೈಷ್ಣವಿ ಉಪಸ್ಥಿತರಿದ್ದರು. ಯೋಜನಾಧಿಕಾರಿ ರಮಾನಂದ ರಾವ್ ಕಾರ್ಯಕ್ರಮವನ್ನು ಆಯೋಜಿಸಿ ಸ್ವಾಗತಿಸಿದರು. ಯೋಜನಾಧಿಕಾರಿ ಶ್ರೀಲತಾ ಆಚಾರ್ಯ ವಂದಿಸಿದರು. 
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರಿಗೆ ತಮ್ಮ ತಮ್ಮ ಪ್ರದೇಶದಲ್ಲಿ ಕೊರೋನಾ ಸೋಂಕಿನಿಂದ  ಗುಣಮುಖರಾದವರಿಂದ ಗಿಡ  ನೆಡಸಿ ಹಾಗೂ ಎಲ್ಲರೂ ಕನಿಷ್ಠ ಒಂದೊಂದು  ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಯಶಸ್ವಿಗೊಳಿಸಲು ಸೂಚಿಸಲಾಯಿತು.
 
 
 
 
 
 
 
 
 
 
 

Leave a Reply