ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಎನ್.ಎಸ್.ಎಸ್. ವತಿಯಿಂದ ‘ಫಿಟ್ ಇಂಡಿಯಾ ಫ್ರೀಡಂ ರನ್’

ಉಡುಪಿ ಶ್ರೀ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ಕ್ರೀಡಾ ವಿಭಾಗದ ಜಂಟಿ ಆಶ್ರಯದಲ್ಲಿ ‘ಫಿಟ್ ಇಂಡಿಯಾ ಫ್ರೀಡಂ ರನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
ಕಾಲೇಜಿನ ಪ್ರಾಚಾರ್ಯರಾದ ಡಾ. ಸುಕನ್ಯಾ ಮೇರಿ ಜೆ ಕಾರ್ಯಕ್ರಮದ ಮಹತ್ವವನ್ನು ತಿಳಿಸುತ್ತಾ “ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಈ ವಿಶಿಷ್ಟ ಕಾರ್ಯಕ್ರಮವನ್ನು ಸರ್ಕಾರವು ಆಯೋಜಿಸಿಜನರಲ್ಲಿ ಲವಲವಿಕೆ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಬಲಿಷ್ಠ ಭಾರತವನ್ನು ನಿರ್ಮಿಸುವಲ್ಲಿ ಸಹಕಾರಿಯಾಗಿದೆ” ಎಂದು ಹೇಳಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಮಂಜುನಾಥ ಜೋಗಿ ಹಾಗೂ ವಿನಯ್ ಇವರು ಮಾರ್ಗದರ್ಶನ ನೀಡಿದರು. ಕಾಲೇಜಿನ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಮಾನಂದರಾವ್ ಕಾರ್ಯಕ್ರಮವನ್ನು ಆಯೋಜಿಸಿ ಸ್ವಾಗತಿಸಿದರು. ಯೋಜನಾಧಿಕಾರಿ ಶ್ರೀಮತಿ ಶ್ರೀಲತಾ ಆಚಾರ್ಯ ವಂದಿಸಿದರು.
 
 
 
 
 
 
 
 
 
 
 

Leave a Reply