ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿಶೇಷ ಉಪನ್ಯಾಸ

ಉಡುಪಿ : ರಾಷ್ಟ್ರೀಯ ಶಿಕ್ಷಣ ನೀತಿ – 2020 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಹಾಗೂ ಅಭಿರುಚಿಗಳಿಗೆ ತಕ್ಕಂತೆ ಅಧ್ಯಯನ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ಯ ಈ ಹೊಸ ನೀತಿಯ ಮೂಲಧಾತುವಾಗಿದೆ.

ಅದೇ ಸಮಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಈ ಹೊಸ ಮನ್ವಂತರಕ್ಕೆ ಹೊಂದಿಕೊಳ್ಳಲು ಅನೇಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕೆಂದು ಭಂಡಾರ್ಕರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅಭಿಪ್ರಾಯಪಟ್ಟರು.

ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ, ಯುವ ರೆಡ್‌ಕ್ರಾಸ್ ಘಟಕ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಯುವ ಸ್ಪಂದನ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಾಲೇಜಿನ ಸುಮಾರು 800 ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾದ ಓಇP – 2020 ಒಂದು ಅವಲೋಕನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್, ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕರಾದ ಪ್ರೊ. ಸೋಜನ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್ ಬಲ್ಲಾಳ್ ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply