ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಅವಧಿ ವಿಸ್ತರಣೆ

2020-21 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 20 ರ ವರೆಗೆ ವಿಸ್ತರಿಸಲಾಗಿದೆ. 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ :

www.ssp.postmatric.karnataka.gov.in ವೆಬ್‌ಸೈಟ್ ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 0820- 2573881, 8050770005 / 8080770004 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply