ಕೇಂದ್ರ ಸರ್ಕಾರ ಅನ್​ಲಾಕ್​-0.5 ಹಂತದಲ್ಲಿ ಶಾಲೆ-ಕಾಲೇಜು ಪ್ರಾರಂಭಕ್ಕೆ ಅವಕಾಶ ನೀಡಿದೆ

ನವದೆಹಲಿ: ಕೇಂದ್ರ ಸರ್ಕಾರ ಅನ್​ಲಾಕ್​-0.5 ಹಂತದಲ್ಲಿ ಶಾಲೆ-ಕಾಲೇಜು ಪ್ರಾರಂಭಕ್ಕೆ ಅವಕಾಶ ನೀಡಿದ್ದು, ಅದರ ಕುರಿತಾದ ನಿರ್ಧಾರವನ್ನು ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ. ಅಕ್ಟೋಬರ್​ 15ರ ನಂತರದಲ್ಲಿ ಶಾಲೆ ಪ್ರಾರಂಭಿಸಬಹುದು ಎಂದು ಹೇಳಿರುವ ಕೇಂದ್ರ ಸರ್ಕಾರ ಅದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಯನ್ನು ಇಂದು ಬಿಡುಗಡೆಗೊಳಿಸಿದೆ.

ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಮಾತನಾಡಿ, ಶಾಲೆ ಪ್ರಾರಂಭ ಮಾಡುವ ಬಗ್ಗೆ ಆಯಾ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಎಸ್​ಒಪಿ ಸಿದ್ದಪಡಿಸಿ, ಅಲ್ಲಿನ ಪರಿಸ್ಥಿತಿಗೆ ಅನುಸಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇನ್ನು ವಿದ್ಯಾರ್ಥಿಗಳು ಶಾಲೆಗೆ ಹೋಗುವ ಬಗ್ಗೆ ಸ್ವಯಂ ತೀರ್ಮಾನಿಸಬೇಕು. ಹಾಗೇ ಅವರ ಪಾಲಕರ ಲಿಖಿತ ಒಪ್ಪಿಗೆ ಇರಲೇಬೇಕು. ಅದರಲ್ಲೂ ಕಂಟೇನ್​ಮೆಂಟ್ ಝೋನ್​ಗಳಲ್ಲಿ ವಾಸವಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶಾಲೆಗೆ ಹಾಜರಾಗಲು ಅವಕಾಶವಿಲ್ಲ.ಅಂತೆಯೆ ವಿದ್ಯಾರ್ಥಿಗಳು ಆನ್​ಲೈನ್​ ಕಲಿಕೆಯನ್ನೂ ಆಯ್ಕೆ ಮಾಡಬಹುದು.

ಇದನ್ನೂ ಹಾಜರಾತಿಗೆ ಪರಿಗಣಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಶಾಲಾ-ಕಾಲೇಜುಗಳಲ್ಲಿ ಕಾರ್ಯಪಡೆಗಳನ್ನು ರಚಿಸಬೇಕು. ತುರ್ತು ಆರೈಕೆ ತಂಡ, ಪ್ರತಿಕ್ರಿಯೆ/ಸಹಾಯ ನೀಡುವ ಫೋರ್ಸ್​, ಸ್ವಚ್ಛತಾ ತಂಡಗಳನ್ನು ರಚಿಸಿ ಜವಾಬ್ದಾರಿ ನೀಡಬೇಕು. ಮಕ್ಕಳು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆಗೆ ಸೂಕ್ತ ಯೋಜನೆ ಯೊಂದಿಗೆ, ಸಾಮಾಜಿಕ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳುವುದು ಅಗತ್ಯ.

ಹಾಗೇ, ಸಾಧ್ಯವಿದ್ದಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಪ್ರತ್ಯೇಕವಾಗಿಸಿ. ಅದರಲ್ಲೂ ಪ್ರತ್ಯೇಕ ಸಮಯವನ್ನು ಅಳವಡಿಸಿ ಎಂದೂ ಮಾರ್ಗಸೂಚಿಯಲ್ಲಿ ಮಾಹಿತಿ ನೀಡಲಾಗಿದೆ. ಶಾಲೆ ಪ್ರಾರಂಭವಾಗಿ 2-3 ವಾರದವರೆಗೂ ಯಾವುದೇ ಮೌಲ್ಯಮಾಪನ ಮಾಡಬಾರದು. ಐಸಿಟಿ ಮತ್ತು ಆನ್​ಲೈನ್​ ಕಲಿಯನ್ನೇ ಪ್ರೋತ್ಸಾಹಿಸಬೇಕು.

ಮಧ್ಯಾಹ್ನದ ಬಿಸಿಯೂಟ ತಯಾರಿಸಿಮಕ್ಕಳಿಗೆ ನೀಡುವ ಶಾಲೆಗಳಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಬೇಕು. ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿಯ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್​ ಪಾಲನೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

 
 
 
 
 
 
 
 
 
 
 

Leave a Reply