ಶಾಲೆ ಆರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ : ಸಚಿವರು ಸ್ಪಷ್ಟನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದೆ ಅನ್ನೋ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ​ಶಾಲೆ ಆರಂಭದ  ಕುರಿತು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.​ 

 
ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡಬೇಕೆ, ಬೇಡವೇ ಅನ್ನೋ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಇಂದಿ ನಿಂದ ಮೂರು ದಿನಗಳ ಕಾಲ ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಎಸ್ ಡಿಎಂಸಿ ಹಾಗೂ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಚರ್ಚೆಯ ನಂತರದಲ್ಲಿ ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ವರದಿಯನ್ನು ಸಲ್ಲಿಕೆ ಮಾಡಲಿದ್ದಾರೆ. ಇತರ ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳನ್ನು ಪುನರಾರಂಭ ಮಾಡಿದ್ದು, ಅಲ್ಲಿನ ಸ್ಥಿತಿಗತಿಯನ್ನು ಅವಲೋಕನ ಮಾಡುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.
​​

ಇನ್ನು ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ಶಾಲೆ, ಕಿತ್ತೂರು ಚೆನ್ನಮ್ಮ ಶಾಲೆ, ಆಶ್ರಮ ಶಾಲೆಗಳಲ್ಲಿ ಶಾಲಾರಂಭದ ಕುರಿತಂತೆಯೂ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ. ಅಲ್ಲದೇ ನಿನ್ನೆ ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆಯಲ್ಲಿ ಚರ್ಚೆಯನ್ನು ನಡೆಸಲಾಗಿದೆ. ಇಂದು ಶಿಕ್ಷಕರ ಸಂಘದ ಅಧ್ಯಕ್ಷರ ಜೊತೆಯಲ್ಲಿ ಚರ್ಚಿಸಿ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗಿದೆ.

Leave a Reply