Janardhan Kodavoor/ Team KaravaliXpress
28.6 C
Udupi
Monday, December 5, 2022
Sathyanatha Stores Brahmavara

ಸದ್ಯಕ್ಕೆ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗುವುದಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಕೋರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಶಾಲಾ-ಕಾಲೇಜುಗಳು ಆರಂಭ ವಾಗುವುದಿಲ್ಲ,ಸದ್ಯ ಅದರ ಬಗ್ಗೆ ಚರ್ಚೆ ನಡೆದಿಲ್ಲ, ವಿದ್ಯಾರ್ಥಿಗಳು ಮತ್ತು ಪೋಷಕರು ಗೊಂದಲವಾಗುವುದು ಬೇಡ ಎಂದು ಪ್ರಧಾನಿ ಮೋದಿಯೊಂದಿಗಿನ ಸಭೆಯ ನಂತರ ಸಚಿವ ಡಾ,ಕೆ ಸುಧಾಕರ್ ಹೇಳಿದ್ದಾರೆ .

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೆಪ್ಟೆಂಬರ್ ತಿಂಗಳ ಕೊನೆಯವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ತಿಳಿಸಿತ್ತು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!