ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ರಾಜ್ಯ ಸಂಸ್ಥೆ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಇವರ ನಿರ್ದೇಶನದಂತೆ ಶಿಕ್ಷಕರ ದಿನಾಚರಣೆಯಂದು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಕಾರ್ಕಳ, ಉಡುಪಿ, ಕಾಪು , ಬ್ರಹ್ಮಾವರ, ಕುಂದಾಪುರ, ಬೈಂದೂರು ವಲಯಗಳಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೋನಾ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸಿದ ಜಿಲ್ಲೆಯ ಕಬ್ಸ್ – ಬುಲ್ ಬುಲ್ಸ್ , ಸ್ಕೌಟ್ಸ್ – ಗೈಡ್ಸ್ , ರೋವರ್ಸ್ – ರೇಂಜರ್ಸ್ ಶಿಕ್ಷಕರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಸ್ಥೆಯಿಂದ, ಉಡುಪಿ ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಯ ವತಿಯಿಂದ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕೊರೊನಾ ವಾರಿಯರ್ಸ್ ಗಳ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದ ಕುರಿತಂತೆ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಸರ್ , ಉಡುಪಿ ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ. ಆಚಾರ್ಯ , ಜಿಲ್ಲಾ ಸ್ಕೌಟ್ ಆಯುಕ್ತರಾದ ಡಾ. ವಿಜಯೇಂದ್ರ ವಸಂತ್ ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ಜ್ಯೋತಿ ಜೆ. ಪೈ ಅವರು ಎಲ್ಲರಿಗೂ ಶುಭಾಶಯವನ್ನು ಕೋರಿದರು.
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರುಗಳು ವಾರಿಯರ್ಸ್ ಗಳಿಗೆ ಶುಭ ಕೋರಿ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೋವಿಡ್ 19 ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಮುಂಜಾಗ್ರತಾ ಕ್ರಮ ವಹಿಸಿ ಆಚರಿಸಲಾಯಿತು. ವಾರಿಯರ್ಸ್ ಗಳು ತಮ್ಮ ಕಾರ್ಯವೈಖರಿಯ ಬಗ್ಗೆ ಅನುಭವ , ಅಭಿಪ್ರಾಯ ವ್ಯಕ್ತಪಡಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.