ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಉಡುಪಿಯ ಸ್ವಸ್ಥವೃತ್ತ ವಿಭಾಗ ಹಾಗೂ ರಾಷ್ಟ್ರೀಯ   ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ದಿನಾಂಕ ೨೧-೦೬-೨೦೨೩ ರಂದು ಅಂತ ರಾಷ್ಟ್ರೀಯ  ಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಮತಾ ಕೆ.ವಿ. ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆಯ ಪ್ರಯುಕ್ತ ದಿನಾಂಕ ೧೪-೦೬-೨೦೨೩ ರಿಂದ ಯೋಗ ಸಪ್ತಾಹ ೭ ದಿನದ ಯೋಗ ತರಬೇತಿ ಕಾರ್ಯಕ್ರಮವನ್ನು ಹಿಂದೂ ಪ್ರಾಥಮಿಕ ಶಾಲೆ, ಉದ್ಯಾವರದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ದಿನಾಂಕ ೨೧-೦೬-೨೦೨೩ ರಂದು ಯೋಗ ಅಭ್ಯಾಸದೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಇದೇ ಸಂದರ್ಭದಲ್ಲಿ ಯೋಗ ಪ್ರದರ್ಶನ ಹಾಗೂ ಇ-ಪೋಸ್ಟರ್ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೆಂಟರ್ ಫಾರ್ ಇಂಟಿಗ್ರೇಟಿವ್ ಮೆಡಿಸಿನ್ ಆ್ಯಂಡ್ ರಿಸರ್ಚ್  ಮಣಿಪಾಲ್ ಅಕಾಡಿಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹಪ್ರಾಧ್ಯಾಪಕರಾದ ಡಾ. ನಿತಿನ್ ಪಾಟೀಲ್ ಇವರು ‘ಯೋಗ ಜೀವನದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ಯೋಗವು ವಿಶ್ವಕ್ಕೆ ಭಾರತದ ಕೊಡುಗೆಯಾಗಿದ್ದು, ಭಾರತೀಯರಾದ ನಾವೆಲ್ಲರೂ ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್.ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ‘ಆಯುರ್ವೇದ ಯೋಗದ ಸಂಬ೦ಧ ಹಾಗೂ ಮಹತ್ವದ ಕುರಿತು ಮಾತನಾಡುತ್ತಾ ಶಾರೀರಿಕ ಹಾಗೂ ಮಾನಸಿಕ ರೋಗಗಳನ್ನು ನಿಯಂತ್ರಣದಲ್ಲಿಡಲು ಆಯುರ್ವೇದ ಮತ್ತು ಯೋಗ ಸಹಕಾರಿಯಾಗಿದೆ’ ಎಂದು ತಿಳಿಸಿದರು. ಸ್ವಸ್ಥವೃತ್ತ ವಿಭಾಗದ ಮುಖ್ಯಸ್ಥರಾದ ಡಾ. ವಿಜಯ್ ಬಿ. ನೆಗಳೂರ್‌ರವರು ಯೋಗ ದಿನಾಚರಣೆಯ ಮಹತ್ವ ಹಾಗೂ ೨೦೨೩ ರ ಧ್ಯೇಯ ವಾಕ್ಯ ‘ವಸುದೈವ ಕುಟುಂಬಕ೦’ ಇದರ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಡಳಿತ ಮುಖ್ಯಾಧಿಕಾರಿಯಾದ ಡಾ. ವೀರಕುಮಾರ ಕೆ., ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹಪ್ರಾಧ್ಯಾಪಕರಾದ ಡಾ. ಯೋಗೀಶ್ ಆಚಾರ್ಯರವರು ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀನಿಧಿ ಧನ್ಯ ಯೋಗ ಸಪ್ತಾಹ ಹಾಗೂ ಯೋಗ ಸ್ಪರ್ಧೆಗಳ ವರದಿಯನ್ನು ವಾಚಿಸಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಸೌಮ್ಯ ಭಟ್ ವಂದಿಸಿದರು. ಸಹಪ್ರಾಧ್ಯಾಪಕರಾದ ಡಾ. ಸಂದೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply