ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ – ರಾಷ್ಟ್ರೀಯ ಮತದಾರರ ದಿನಾಚರಣೆ

ಕೋಟ : ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ ಸರಕಾರಿ ಪ್ರೌಢಶಾಲೆ ಇಲ್ಲಿ ರಾಷ್ಟ್ರೀಯ ಮತದಾರರ ದಿವಸ ಆಚರಣೆ ಕಾರ್ಯಕ್ರಮ ಮಂಗಳವಾರ ಜರುಗಿತು. 

ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ತಿಳಿಸಿ, ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಸಹನಾ ಮತದಾರರ ದಿವಸ ಆಚರಣೆಯ ಮಹತ್ವದ ಕುರಿತು ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ನೋಡಲ್ ಅಧಿಕಾರಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ಅನಿತಾ ನಿರೂಪಿಸಿ ವಂದಿಸಿದರು.

ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ ಸರಕಾರಿ ಪ್ರೌಢಶಾಲೆ ಇಲ್ಲಿ ರಾಷ್ಟ್ರೀಯ ಮತದಾರರ ದಿವಸ ಆಚರಣೆ ಅಂಗವಾಗಿ ‘ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಅನಿತಾ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply