ಶ್ರೀ ಸೋದೆ ವಾದಿರಾಜ ಮಠದ ವತಿಯಿಂದ ಶಾಲಾ ವಾಹನ ಕೊಡುಗೆ

150 ವರ್ಷಗಳ ಇತಿಹಾಸವುಳ್ಳ ಕಡಿಯಾಳಿ ಹಿರಿಯ ಪ್ರಾರ್ಥಮಿಕ ಶಾಲೆಯ ಆಡಳಿತ ಜವಾಬ್ದಾರಿಯನ್ನು  2018 ರಲ್ಲಿ ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ವಹಿಸಿಕೊಂಡಿದೆ. ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿ -ಬೆಳೆಸುವ ನಿಟ್ಟಿನಲ್ಲಿ, ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಆಶಯದಿಂದ ಅಧ್ಯಕ್ಷರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹಾಗೂ ಟ್ರಸ್ಟಿನ ಆಡಳಿತ ಮಂಡಳಿಯು ಅನೇಕ ನುರಿತ ಶಿಕ್ಷಕರನ್ನು ನೇಮಕಾತಿ ಮಾಡಿದೆ. 
2020 ರಲ್ಲಿ ಶಿವಳ್ಳಿ ಗ್ರಾಮದ ಆಸು ಪಾಸಿನ ವಿದ್ಯಾರ್ಥಿಗಳಿಗೆ ಸಮಂಜಸ ಶಾಲಾ ಶುಲ್ಕದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಬೇಕೆಂದು ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿದ್ದಲ್ಲದೇ, ಅಂದಾಜು 2 ಕೋಟಿ ವೆಚ್ಚದಲ್ಲಿ ನೂತನ ಸುಸಜ್ಜಿತ ಶಾಲಾ ಕಟ್ಟಡದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ.
 
 ಈ ಎಲ್ಲಾ ಬೆಳವಣಿಗೆಯ ಮಧ್ಯದಲ್ಲಿ ತಾ 17-10-2022 ರಂದು ಶಾಲಾ ಮಕ್ಕಳ ಸುರಕ್ಷಿತ ಪ್ರಯಾಣಕ್ಕಾಗಿ ಶಾಲಾ ವಾಹನವನ್ನು ಶ್ರೀ ಸೋದೆ ವಾದಿರಾಜ ಮಠದ ವತಿಯಿಂದ ಶ್ರೀಪಾದರು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಇದರ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್, ಕಡಿಯಾಳಿ ಶಾಲೆಯ ಆಡಳಿತ ಅಧಿಕಾರಿಗಳಾದ ಶ್ರೀಮತಿ ಪ್ರಭಾವತಿ ಅಡಿಗ ಹಾಗೂ  ಶಾಲೆಯ ಮುಖ್ಯೋಪಾದ್ಯಾ ಯರು, ಶಿಕ್ಷಕರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply