ನಾಳೆ ಮಧ್ಯಾಹ್ನ 12.30ಕ್ಕೆ ‘SSLC ಪರೀಕ್ಷೆ’ ಫಲಿತಾಂಶ 

ಮೇ 19ರ ನಾಳೆ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ( SSLC Exam Results ) ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಘೋಷಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ (Karnataka Secondary Education Examination Board -KSEEB) ಮಾಹಿತಿ ಬಿಡುಗಡೆ ಮಾಡಿದ್ದು, ಮೇ.19ರಂದು ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ( SSLC Results ) ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದೆ.

 sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

ಫಲಿತಾಂಶ ವೀಕ್ಷಿಸಲು ಇತ್ತ ನೋಡಿ :-

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಘೋಷಣೆಯಾದ ನಂತರ karresults.nic.in ಮತ್ತು sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.

ಈ ಪುಟದಲ್ಲಿ ತೋರಿಸುವಂತ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಣೆಯ ಲಿಂಕ್ ಕ್ಲಿಕ್ ಮಾಡಬೇಕು.

ಆಗ ತೆರೆದುಕೊಳ್ಳುವಂತ ಮತ್ತೊಂದು ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿದಬೇಕು.

ಈ ಬಳಿಕ, ಫಲಿತಾಂಶ ವೀಕ್ಷಣೆಯ ಬಳಿಯಲ್ಲಿ ದ್ರೇ.. ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ ಸಿಗಲಿದೆ

ಅಂದಹಾಗೇ, ಕರ್ನಾಟಕ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳ ನೋಂದಣಿಯಾಗಿದೆ.

 ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ರಾಜ್ಯದ 3,440 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply