ಮೇ ಯಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭ -ಸುರೇಶ್ ಕುಮಾರ್

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್. ಎಲ್.ಸಿ ಪರೀಕ್ಷೆಗಳು ಜೂನ್  ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

1-9 ರವರೆಗೆ ಪಠ್ಯ ಕಡಿತವಿಲ್ಲ – ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ.

ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನ ವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯ ಮಾಪನಾ ಪ್ರಕ್ರಿಯೆ ಜಾರಿ ಯಲ್ಲಿರಲಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply