ಮೇ 24 ರಿಂದ ಪಿಯುಸಿ, ಜೂನ್ 21 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ವಿಜಯಪುರ : ಮೇ 24 ರಿಂದ ಪಿಯುಸಿ ಮತ್ತು ಜೂನ್ 21 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಮಾಹಿತಿ ನೀಡಿದ್ದಾರೆ.

 ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಪೂರ್ವ ತಯಾರಿಯ ಪರಿಶೀಲನಾ ಸಭೆಯನ್ನು ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ ನಡೆಸಿ, ಕಳೆದ ವರ್ಷ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರೂ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಗೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಸಂಬಂಧ ಪರೀಕ್ಷೆ ನಡೆಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಬೋರ್ಡ್ ಪರೀಕ್ಷೆಗಳು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.

 
 
 
 
 
 
 
 
 
 
 

Leave a Reply