ಶಾಲೆ ಆರಂಭಿಸಲು ರಾಜ್ಯ ಸರ್ಕಾರಕ್ಕಿಲ್ಲ ಅವಸರ

ಬೀದರ: ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತದೆ ಎಂಬ ಊಹಾಪೋಹಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶಕುಮಾರ್ ತೆರೆ ಎಳೆದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಶಾಲಾ ಕಾಲೇಜು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಯಾವುದೇ ದಿನಾಂಕ ನಿಗದಿಪಡಿಸಿಲ್ಲ.

ಸದ್ಯದಲ್ಲೇ ಪ್ರಾರಂಭ ಮಾಡುವ ಯೋಚನೆಯು ಮಾಡಿಲ್ಲ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸೆ.29ರಂದು ಬೀದರ್ ಗೆ ಆಗಮಿಸಿ , ಹಲವಾರು ಶಾಲೆಗಳನ್ನು ಭೇಟಿ ಮಾಡಿ, ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಮಕ್ಕಳ ಹಿತಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತದೆ ಹಾಗಾಗಿ ಜನರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ. 

ಶಾಲೆಗಳು ನಡೆಯದೇ ಇರುವುದರಿಂದ ಬಾಲ ಕಾರ್ಮಿಕರ ಸಂಖ್ಯೆ ಏರುತ್ತಿದೆ ಎಂಬ ದೂರುಗಳು ಬರುತ್ತಿವೆ. ಆ ಕಾರಣಕ್ಕೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಶಿಕ್ಷಣಕ್ಕೆ ಸಂಬಂಧಿಸಿದ ಸಂಘಟನೆಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿ ಶಾಲೆಗಳು ಆರಂಭಿಸುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಪೋಷಕರು ಸಹ ಮುಕ್ತವಾಗಿ ಅಭಿಪ್ರಾಯಗಳನ್ನು ನೀಡಲು ಇಮೇಲ್ ಐಡಿ ನೀಡಲಾಗಿದೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ಅವಸರವಿಲ್ಲ. ಮಕ್ಕಳ ಹಿತದೃಷ್ಟಿಯಿಂದ, ಪೋಷಕರ ಕಾಳಜಿಯನ್ನು ಗಮನಿಸಿಕೊಂಡು ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply