Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿಯಲ್ಲಿ ಸವಿ ಪ್ರತಿಭಾ ಶೋಧ ಬಹುಮಾನ ವಿತರಣೆ

ಗಂಗೊಳ್ಳಿ : ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. 

 ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ (ರಿ ) ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಜಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. 

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಮತ್ತು ಶಾಲೆಟ್ ಲೋಬೊ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿಶಾ ಬಿ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಹಾಗೂ ಯು ಬಿ ಶೆಟ್ಟಿ ಆಂಗ್ಲಮಾಧ್ಯಮ ಪ್ರೌಢಶಾಲೆ ಬೈಂದೂರಿನ ಸ್ಕಂದ ರಾಜ್ ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ಸಮಾಧಾನಕರ ಬಹುಮಾನವನ್ನು ಪಡೆದರು. 

ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘನಾ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವಂದಿತಾ ಭಟ್ ಹಾಗೂ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶರಧಿ, ಚಿತ್ರಕಲೆ ಸ್ಪರ್ಧೆಯಲ್ಲಿ ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೈಂದೂರಿನ ವಿದ್ಯಾರ್ಥಿನಿ ಖುಷಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಷಮಾ ಆಚಾರ್ಯ ಹಾಗೂ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ಸಾಯೀಶ್, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ಶ್ರೀನಿಧಿ ಪೂಜಾರಿ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ಪವಿತ್ರ ಎನ್, ಹಾಗೂ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮಿಷಾ, ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪದ್ಮಶ್ರೀ ಕಿಣಿ, ಬೆಂಗಳೂರಿನ ಯುಬಿ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಏಕ್ತಾ, ಗುಜ್ಜಾಡಿಯ ಸರಕಾರಿ ಪ್ರೌಢಶಾಲೆಯ ಏಸ್ಟನ್ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ಸಮಾಧಾನಕರ ಬಹುಮಾನವನ್ನು ಪಡೆದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!