ಸಮಾಜಕಲ್ಯಾಣ ಇಲಾಖೆಯಿಂದ ಇಲಾಖಾ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ತಾಲೂಕು ಸಮಾಜಕಲ್ಯಾಣ ಇಲಾಖೆ ಉಡುಪಿ ವತಿಯಿಂದ ಸಮಾಜಕಲ್ಯಾಣ ಇಲಾಖೆಯಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ವಿವಿಧ ಸೌಲಭ್ಯಗಳ ಕುರಿತಾದ ಒಂದು ದಿನದ ಕಾರ್ಯಾಗಾರ ಮಾ.17 ರಂದು ನಡೆಯಿತು. 

ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಉದ್ಘಾಟಿಸಿದರು. ಉಡುಪಿ ತಾಲೂಕು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ರಮೇಶ್ ಎಸ್. ಎನ್. ಮಾತನಾಡಿ ಸರಕಾರವು ವಿದ್ಯಾರ್ಥಿಗಳಿಗೆ ಕೊಡುವ ವಿವಿಧ ವಿದ್ಯಾರ್ಥಿ ವೇತನಗಳ ಅರಿವು ಹಾಗೂ ಅಸ್ಪೃಶ್ಯತಾ ನಿವಾರಣಾ ಅರಿವು ಮೂಡಿಸುವುದಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಲಾಗಿದೆ ಎಂದರು. 

ಉಡುಪಿಯ ವಕೀಲ ಶ್ರೀ ಮಂಜುನಾಥ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ದೌರ್ಜನ್ಯ ಪ್ರತಿಬಂಧ ಕಾಯ್ದೆ ಹಾಗೂ ನಾಗರಿಕ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಡುಪಿ ಸಮಾಜ ಕಲ್ಯಾಣ ಇಲಾಖೆಯ ಕಛೇರಿ ಅಧೀಕ್ಷಕರಾದ ವಿಜಯಲಕ್ಷ್ಮಿ ದಿನ್ನಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಕರ್ನಾಟಕ ಎಜ್ಯುಕೇಶನ್ ಸೊಸೈಟಿ, ಉಡುಪಿ ಇದರ ಕಲಾ ತಂಡದ “ನಮ್ಮ ನಡೆಸಮಾನತೆ ಕಡೆ” ಎಂಬ ಕಿರು ನಾಟಕ ಪ್ರದರ್ಶನಗೊಂಡಿತು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ರಾಘವ ನಾಯ್ಕ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ  ಮಂಜುನಾಥ ವಂದಿಸಿದರು. ತೃತೀಯ ಬಿ.ಎ.ಯ ಅಶ್ವಿಜಾ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply